LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

10 ದಿನಗಳಲ್ಲಿ ಮೂರನೇ ಬಾರಿ ಪೆಟ್ರೋಲ, ಡೀಸೆಲ್‌ ದರ ಹೆಚ್ಚಳ

ಹೊಸದಿಲ್ಲಿ, ಮೇ 23 : ಚುನಾವಣೆ ಪ್ರಕ್ರಿಯೆ ಮುಗಿದ ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ ತೈಲ ಕಂಪನಿಗಳು ಮತ್ತೆ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಿಸುತ್ತ ನಡೆದಿದ್ದು  ಕಳೆದ 10 ದಿನಗಳಲ್ಲಿ ಮೂರನೇ ಬಾರಿ ಇಂಧನ ದರ ಏರಿಕೆ ಮಾಡಲಾಗಿದೆ.

ಶುಕ್ರವಾರ ಮತ್ತೆ ಪೆಟ್ರೋಲ್‌ ದರವನ್ನು ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್‌ ದರವನ್ನು 91 ಪೈಸೆ ಹೆಚ್ಚಿಸಲಾಗಿದೆ. ಹೊಸದಿಲ್ಲಿಯಲ್ಲಿ ಪೆಟ್ರೋಲ್‌ ದರ ₹98.64ರಿಂದ ₹99.51ಕ್ಕೆ ಏರಿಕೆಯಾದರೆ, ಡೀಸೆಲ್‌ ದರ ₹91.58ರಿಂದ ₹92.49ಕ್ಕೆ ತಲುಪಿದೆ.

ಮೇ 15ರಂದು ಮೊದಲ ಬಾರಿಗೆ ಲೀಟರ್‌ಗೆ ₹3ರಷ್ಟು ದರ ಹೆಚ್ಚಿಸಲಾಗಿತ್ತು. ಬಳಿಕ ಮೇ 19ರಂದು ಮತ್ತೆ ಸುಮಾರು 90 ಪೈಸೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ದರ ಏರಿಕೆಯಾಗಿದ್ದು, ಒಟ್ಟಾರೆ 10 ದಿನಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಲೀಟರ್‌ಗೆ ಸುಮಾರು ₹5ರವರೆಗೆ ಏರಿಕೆಯಾಗಿದೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್‌ ₹110.57 ಹಾಗೂ ಡೀಸೆಲ್‌ ₹96.04ಕ್ಕೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್‌ ₹107.56 ಮತ್ತು ಡೀಸೆಲ್‌ ₹94.05 ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್‌ ₹104.54 ಹಾಗೂ ಡೀಸೆಲ್‌ ₹96.16ಕ್ಕೆ ಏರಿಕೆಯಾಗಿದೆ.

ದರ ಏರಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಚುನಾವಣೆ ನಡೆಯುವವರೆಗೆ ದರಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು, ಮತದಾನ ಮುಗಿದ ತಕ್ಷಣ ಜನರ ಮೇಲೆ ಹೊರೆ ಹಾಕಲಾಗಿದೆ ಎಂದು ಆರೋಪಿಸಿವೆ. ಕಳೆದ ಹಲವು ತಿಂಗಳುಗಳಿಂದ ದರ ಸ್ಥಿರವಾಗಿದ್ದರೂ, ಚುನಾವಣೆ ಮುಗಿದ ಬೆನ್ನಲ್ಲೇ ಸತತವಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ.

ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ, ತರಕಾರಿ, ದಿನಸಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ಈಗಾಗಲೇ ದುಬಾರಿ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ಮಧ್ಯಮ ವರ್ಗ ಹಾಗೂ ಬಡ ಜನರಿಗೆ ಈ ನಿರ್ಧಾರ ಮತ್ತೊಂದು ಹೊಡೆತವಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಾತನಾಡಿದ್ದ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ, ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಮತ್ತು ಎಲ್‌ಪಿಜಿ ಕೊರತೆ ಇಲ್ಲ ಎಂದು ಭರವಸೆ ನೀಡಿದ್ದರು. ಆದರೆ ಜನರು ಪ್ರಶ್ನಿಸುತ್ತಿರುವುದು ಕೊರತೆಯ ಬಗ್ಗೆ ಅಲ್ಲ, ನಿರಂತರವಾಗಿ ಏರುತ್ತಿರುವ ಬೆಲೆಗಳ ಬಗ್ಗೆ ಎಂಬ ಟೀಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ