LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪಾರಿವಾಳದ ಜಗಳ : 9 ಜನ ಜೈಲಿಗೆ

ಬೆಳಗಾವಿ: ಹೆಣ್ಣು, ಹೊನ್ನು, ಮಣ್ಣಿಗಾಗಿ ಜಗಳಾಡುವದನ್ನು ದಿನನಿತ್ಯ ಪತ್ರಿಕೆಗಳಲ್ಲಿ ಓದುತ್ತೇವೆ. ಆದರೆ ವಿಚಿತ್ರ ಜಗಳವೊಂದು ನಡೆದು ವಿಕೋಪಕ್ಕೆ ಹೋಗಿದೆ.



ತಾಲೂಕಿನ ಬಸ್ತವಾಡ ಗ್ರಾಮದ ಜೈನ ಜಾತ್ರೆ ವೇಳೆ 1500 ರೂ. ಪಾರಿವಾಳ ವಿಷಯಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿ ಹೊಡೆದಾಡಿಕೊಂಡಿರುವ ಘಟನೆ ಗುರುವಾರ ನಡೆದಿದ್ದು, ದೂರು-ಪ್ರತಿದೂರು ದಾಖಲಾಗಿದೆ.



ಬಸ್ತವಾಡ ಗ್ರಾಮದಲ್ಲಿ ಜೈನ ಜಾತ್ರೆಗೆ ಬಂದಿದ್ದ ಆದಿತ್ಯಾ ಕಲ್ಲಪ್ಪ ಪಾಟೀಲ ಹಾಗೂ ದರ್ಶನ ಬಾಹುಬಲಿ ಕುಡಚಿ ಇವರಿಬ್ಬರ ಮಧ್ಯೆ ಪಾರಿವಾಳದ 1500 ರೂ. ಬಗ್ಗೆ  ಗಲಾಟೆಯಾಗಿದೆ. ಆದಿತ್ಯಾ ಪಾಟೀಲ ಹಾಗೂ ಈತನೊಂದಿಗರ ಇನ್ನೂ 8 ಜನ ಸೇರಿ ದರ್ಶನ ಕುಡಚಿಯನ್ನು ಹೊಡೆದಿದ್ದು, ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮೂವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.



ಬಳಿಕ ದರ್ಶನ ಕುಡಚಿ ಈತನ ಸಹಚರರು ಬಸವನ ಕುಡಚಿಗೆ ಗ್ರಾಮಕ್ಕೆ ಆದಿತ್ಯಾ ಪಾಟೀಲನ ಮನೆಗೆ ನುಗ್ಗಿ ಈತನ ತಂದೆ, ಸಹೋದರನೊಂದಿಗೆ ಗಲಾಟೆ ಮಾಡಿದ್ದಾರೆ. ಮನೆಯಲ್ಲಿದ್ದ ಟಿವಿ, ಕಿಟಕಿ ಗಾಜು ಧ್ವಂಸಗೊಳಿಸಿ ಪಾತ್ರೆಗಳನ್ನು ಚಿಲ್ಲಾಪಿಲ್ಲಿ ಮಾಡಿ ತಂದೆಯ ಕೈಗೆ ಹಗ್ಗದಿಂದ ಕಟ್ಟಿ ಮನೆಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.‌



ಈ ಬಗ್ಗೆ ಮಾಳಮಾರುತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಆರು ಜನರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು