LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು!

ಹೊನ್ನಾವರ, ಮೇ ೨೫: ಪೊಲೀಸರ ಕಿರಿ ಕಿರಿ, ದರ್ಪದ ಬಗ್ಗೆ ಜನರಿಂದ ಆಗಾಗ ಕೇಳುತ್ತಿರುತ್ತೇವೆ. ಆದರೆ ಈಗ ಸಂಚಾರಿ ಪೊಲೀಸರು ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿದಂಥ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬೆಳಕಿಗೆ ಬಂದಿದೆ.



ಚಂದ್ರಕಾಂತ ಹಳ್ಳೇರ ಎಂಬುವವರು ಮರಳು ತುಂಬಿದ ಟಿಪ್ಪರ್ ಲಾರಿ ಚಲಾಯಿಸುತ್ತಿದ್ದರು. ಹೊನ್ನಾವರದ ಅಳಂಕಿ ಬಳಿ ಹೊನ್ನಾವರ ಸಂಚಾರಿ ಪೊಲೀಸರು ಲಾರಿ ತಡೆದಿದ್ದಾರೆ. ಬಳಿಕ ಲಾರಿ ಚಾಲಕನಿಗೆ 500 ರೂಪಾಯಿ ದಂಡ ವಿಧಿಸಿ ರಶೀದಿ ನೀಡಿದ್ದಾರೆ. ರಶೀದಿ ನೋಡಿದ ಚಾಲಕನಿಗೆ ಅಚ್ಚರಿಯಾಗಿದೆ. ಕಾರಣ ರಶೀದಿಯಲ್ಲಿ “ಹೆಲ್ಮೆಟ್ ಧರಿಸದಿದ್ದಕ್ಕೆ ಡಂಡ” ಎಂದಿತ್ತು.



ಸಾವರಿಸಿಕೊಂಡು ಲಾರಿ ಚಾಲಕ ಸರ್ ನಾನು ಬೈಕ್ ಓಡಿಸುತ್ತಿಲ್ಲ, ಟಿಪ್ಪರ್ ಲಾರಿ ಓಡಿಸುತ್ತಿದ್ದೇನೆ ಎಂದು ಪೊಲಿಸರಿಗೆ ಹೇಳಿದ್ದಾರೆ. ಆದರೂ ಪೊಲೀಸರು ಹೇ ಅದೆಲ್ಲ ಇರುತ್ತೆ ಎಂದು ಹೇಳಿ ಪೊಲೀಸರು ಏನೆಲ್ಲ ಮಾಡಬಹುದು ಎನ್ನುವಂತೆ ರಶೀದಿ ಕೊಟ್ಟು ಕಳುಹಿಸಿದ್ದಾರೆ.



ಮಾವಿನ ಖುರ್ವದ ವಿನುತಾ ವಿನೋದ ನಾಯ್ಕ ಎಂಬುವವರಿಗೆ ಸೇರಿದ ಟಿಪ್ಪರ್ ಲಾರಿಗೆ ಚಂದ್ರಕಾಂತ ಚಾಲಕರಾಗಿದ್ದಾರೆ. ಸಂಚಾರಿ ಪೊಲೀಸರ ಎಡವಟ್ಟು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ