LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತಾಂತರದ ಆರೋಪ : ಪೊಲೀಸ್ ಠಾಣೆಗೆ ಮುತ್ತಿಗೆ 

ಹುಬ್ಬಳ್ಳಿ‌: ಶಿಕ್ಕಲಗಾರ ಸಮುದಾಯದ ಕುಟುಂಬಗಳನ್ನು ಗುರಿಯಾಗಿಸಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿಕ್ಕಲಗಾರ ಸಮುದಾಯ ಹಾಗೂ ಹಿಂದೂ ಮುಖಂಡರು ರಾತ್ರಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.



ಶಿಕ್ಕಲಗಾರ ಸಮುದಾಯದ ಕುಟುಂಬವೊಂದರಲ್ಲಿ ಮತಾಂತರದ ವಿಚಾರವಾಗಿ ದಂಪತಿಯ ನಡುವೆ ಬಿರುಕು ಮೂಡಿತ್ತು. ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಪತಿಗೆ ಒತ್ತಡ ಹಾಕಿದ್ದು, ಮತಾಂತರ ಆಗದಿದ್ದರೆ ಸಂಸಾರ ಮಾಡುವುದಿಲ್ಲವೆಂದು ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. ಇದರಿಂದ ಬೇಸತ್ತ ಪತಿ, ಈ ವಿಚಾರವನ್ನು ಸಮುದಾಯದ ಮುಖಂಡರ ಗಮನಕ್ಕೆ ತಂದಿದ್ದಾರೆ.



ಮತಾಂತರ ಆಗುವಂತೆ ಶಿಕ್ಕಲಗಾರ ಸಮುದಾಯದ ಕೆಲವರು ಹಾಗೂ ಕೆಲ ಕ್ರಿಶ್ಚಿಯನ್ ಮುಖಂಡರು ನನ್ನ ಪತ್ನಿಯ ತಲೆ ಕೆಡಿಸಿದ್ದಾರೆಂದು ಆರೋಪಿಸಿ ಸಂಪತ್ ಬಗನಿ ಎಂಬಾತ ರೌಡಿ ಶೀಟರ್ ಮದನ್ ಬುಗುಡಿ ಸೇರಿದಂತೆ ಹದಿನೈದು ಜನರ ವಿರುದ್ಧ ಮತಾಂತರದ ದೂರು ದಾಖಲಿಸಿದ್ದಾರೆ.



ಇದೀಗ ಪ್ರಕರಣ ವಿಕೋಪಕ್ಕೆ ತಿರುಗಿದ್ದು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಶಿಕ್ಕಲಗಾರ ಸಮುದಾಯದ ಯುವಕರು ಜಯತೀರ್ಥ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮತಾಂತರಕ್ಕೆ ಪ್ರೇರೇಪಣೆ ನೀಡುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ