LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಸಮವಸ್ತ್ರದಲ್ಲಿದ್ದ ಪೊಲೀಸರು; ಇಬ್ಬರ ವರ್ಗಾವಣೆ

ಶಿವಮೊಗ್ಗ, ಸೆ. 16 : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಮವಸ್ತ್ರದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಬಿಜೆಪಿ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿದಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಇಬ್ಬರೂ ಸಿಬ್ಬಂದಿಯನ್ನು ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಶಿವಮೊಗ್ಗದ ಕೋಟೆ ಶ್ರೀ ಭೀಮೇಶ್ವರ ದೇವಾಲಯದ ಸಮೀಪ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಚೆನ್ನಬಸಪ್ಪ ಅವರನ್ನು ಸಮವಸ್ತ್ರದಲ್ಲಿದ್ದ ಇಬ್ಬರು ಸಂಚಾರಿ ಪೊಲೀಸ್ ಸಿಬ್ಬಂದಿ ಹೆಗಲ ಮೇಲೆ ಎತ್ತಿಕೊಂಡು ಸಂಭ್ರಮದಿಂದ ಕುಣಿದಾಡಿದ್ದರು. ಈ ದೃಶ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಚರ್ಚೆಗೆ ಕಾರಣವಾಗಿತ್ತು.

ಪೊಲೀಸ್ ಸಿಬ್ಬಂದಿ ಸಮವಸ್ತ್ರದಲ್ಲಿರುವಾಗ ಜನಪ್ರತಿನಿಧಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಕುಣಿದಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಗಳು ವ್ಯಕ್ತವಾದ ನಂತರ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ ಹಾಗೂ ಪ್ರಕಾಶ ಎ.ಕೆ. ಅವರನ್ನು ವರ್ಗಾವಣೆ ಮಾಡಲಾಗಿದೆ. ಗಣೇಶ್ ಅವರನ್ನು ಆಗುಂಬೆ ಪೊಲೀಸ್ ಠಾಣೆಗೆ, ಪ್ರಕಾಶ್ ಎ.ಕೆ. ಅವರನ್ನು ಆನವಟ್ಟಿ ಪೊಲೀಸ್ ಠಾಣೆಗೆ ವರ್ಗಾಯಿಸಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಆದೇಶ ಹೊರಡಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ರಾಜಕುಮಾರ ಬಳಿಕ ಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಸಮವಸ್ತ್ರದಲ್ಲಿದ್ದ ಪೊಲೀಸರು; ಇಬ್ಬರ ವರ್ಗಾವಣೆಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಣಿಯಬೇಡಿ: ರಾಹುಲ್ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಡಾ. ಜಿ. ಪರಮೇಶ್ವರಶಿಸ್ತು, ಜಾಗೃತಿಯಿಂದ ಗಣೇಶೋತ್ಸವ ಆಚರಿಸಿ: ಮೇಯರ್ ಪ್ರೀತಿ ಕಾಮಕರ್ಆಸ್ತಿ ಹಂಚಿಕೆ ವಿವಾದ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ, ವಕೀಲ ಪುತ್ರಿಯ ಬರ್ಬರ ಹತ್ಯೆಯುಪಿಐ ಶುಲ್ಕ ಜನರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್’: ಸಚಿವ ಶಿವರಾಜ ತಂಗಡಗಿ ಟೀಕೆ‘ವಂದೇ ಮಾತರಂ’ ಪೂರ್ಣ ಹಾಡಿದರೆ ರಾಜೀನಾಮೆ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲುರೈಲ್ವೆ ಯೋಜನೆಗೆ ಭೂಸ್ವಾಧೀನ: ಎಕರೆಗೆ ₹1 ಕೋಟಿ ಪರಿಹಾರಕ್ಕೆ ರೈತರ ಆಗ್ರಹ