LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು : 92 ಶಾಸಕರ ರಾಜೀನಾಮೆ

ಜೈಪುರ : ರಾಜಸ್ಥಾನದಲ್ಲಿ ದೊಡ್ಡ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ. ಸಚಿನ್ ಪೈಲಟ್‌ಗೆ ಅಧಿಕಾರ ಹಸ್ತಾಂತರಿಸುವುದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಬೆಂಬಲಿಗ ಶಾಸಕರು ಸ್ಪಷ್ಟಪಡಿಸಿದ್ದಾರೆ.



ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಗೆಹ್ಲೋಟ್ ಬಣದ ಎಲ್ಲಾ ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಎಲ್ಲಾ ಶಾಸಕರು ತಮ್ಮ ರಾಜೀನಾಮೆಯನ್ನು ಸಭಾಪತಿ ಸಿಪಿ ಜೋಶಿ ಅವರಿಗೆ ಸಲ್ಲಿಸಲಿದ್ದಾರೆ.



ಎಲ್ಲಾ ಶಾಸಕರು ಕೋಪಗೊಂಡು ರಾಜೀನಾಮೆ ನೀಡುತ್ತಿದ್ದಾರೆ ಎಂದು ರಾಜಸ್ಥಾನ ಸರ್ಕಾರದ ಸಚಿವ ಮತ್ತು ಗೆಹ್ಲೋಟ್ ಅವರ ಆಪ್ತರಾದ ಪ್ರತಾಪ ಸಿಂಗ್ ಖಚರಿಯಾವಾಸ್ ಹೇಳಿದ್ದಾರೆ.



ಇದಕ್ಕಾಗಿ ರಾಷ್ಟ್ರಪತಿಗಳ ಮೊರೆ ಹೋಗುತ್ತೇವೆ. ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ಸಂಪರ್ಕಿಸದೆ ಹೇಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು 92 ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಎಂದು ವರದಿಯಾಗಿದೆ.



ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂಬ ನಿರ್ಣಯವನ್ನು ಅಂಗೀಕರಿಸುವಂತೆ ಶಾಸಕರಿಗೆ ಸೂಚಿಸಲಾಯಿತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ