LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜನಪ್ರಿಯ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ನಿಧನ

ಧಾರವಾಡ : ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ



ಹಾಸ್ಯ ನಟ, ರಂಗಭೂಮಿ ಕಲಾವಿದ, ರಂಗಕರ್ಮಿ ರಾಜು ತಾಳಿಕೋಟಿ (62) ಸೋಮವಾರ ಮಣಿಪಾಲ್‌ದ ಕೆಎಂಸಿ ಆಸ್ಪತ್ರೆಯಲ್ಲಿ ತೀವ್ರ ಹೃದಯಘಾತದಿಂದ ನಿಧನರಾದರು ಎಂದು ಅವರ ಮಗ ಭರತ ತಾಳಿಕೋಟಿ ತಿಳಿಸಿದ್ದಾರೆ.



ಚಲನಚಿತ್ರದ ಚಿತ್ರೀಕರಣಕ್ಕಾಗಿ ಮಂಗಳೂರಿನಲ್ಲಿದ್ದ ರಾಜು ತಾಳಿಕೋಟಿ ಅವರಿಗೆ ಭಾನುವಾರ ರಾತ್ರಿ ತೀವ್ರ ಹೃಯಾಘಾತ ಆಗಿತ್ತು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ಆಸ್ತತ್ರೆಯಲ್ಲಿ ನಿಧನರಾದರು.



ಪ್ರಸ್ತುತ ಧಾರವಾಡ ರಂಗಾಯಣ ನಿರ್ದೇಶಕರಾಗಿ ಸೇವೆಯಲ್ಲಿದ್ದ ಅವರು, ಸಿನೆಮಾವೊಂದರ ಚಿತ್ರೀಕರಣಕ್ಕಾಗಿ ಕಳೆದ ವಾರ ಉಡುಪಿ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದರು. ಹೆಬ್ರಿ ಬಳಿ ಶೂಟಿಂಗ್ ವೇಳೆ ಹೃದಯಾಘಾತದಿಂದ ಅಸುನೀಗಿದ್ದಾರೆ.



ಮಂಗಳವಾರ ಅವರ ಊರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಅವರ ಪುತ್ರ ಭರತ ತಾಳಿಕೋಟಿ ಅವರು ತಿಳಿಸಿದ್ದಾರೆ.



ಕಲಿಯುಗದ ಕುಡುಕ ಸೇರಿದಂತೆ ಅನೇಕ ಉತ್ತರ ಕರ್ನಾಟಕದ ಹಾಸ್ಯ ನಾಟಕಗಳಲ್ಲಿ ಅಭಿನಯಿಸಿ ಮನೆಮಾತಾಗಿದ್ದರು. ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು.

ರಾಜು ತಾಳಿಕೋಟಿ ಅವರು ಮೂಲತಃ ವಿಜಯಪುರ ಜಿಲ್ಲೆಯ ತಾಳಿಕೋಟಿಯವರಾಗಿದ್ದರು. ಇತ್ತೀಚೆಗೆ ರಂಗಾಯಣ ಧಾರವಾಡದ ನಿರ್ದೇಶಕರಾಗಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು