LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿ

ಹೊಸದಿಲ್ಲಿ, ಸೆ 3 : (ಸಮದರ್ಶಿ ಸುದ್ದಿ) - ಬಾಲಾಕೋಟ್ ದಾಳಿ ಬಳಿಕ ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿ, ಪಾಕಿಸ್ತಾನದ ವಶಕ್ಕೆ ಸಿಲುಕಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವೀರ ಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ ಅವರು ವಾಯುಪಡೆಯಿಂದ ಅವಧಿಗೂ ಮುನ್ನ ನಿವೃತ್ತಿ ಪಡೆದಿದ್ದಾರೆ. ಇದೀಗ ಅವರು ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಜೀವನ ಆರಂಭಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸುಮಾರು 22 ವರ್ಷಗಳ ಕಾಲ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದ ಅಭಿನಂದನ್ ಅವರು ಆಗಸ್ಟ್‌ನಲ್ಲಿ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ ಫ್ಲೈ91ಗೆ ಪೈಲಟ್ ಆಗಿ ಸೇರ್ಪಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಆದರೆ ಅಭಿನಂದನ್ ವರ್ಧಮಾನ್ ಅವರು ಈ ಕುರಿತು ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಫ್ಲೈ91 ಸಂಸ್ಥೆಯ ವಕ್ತಾರರು ಉದ್ಯೋಗಿಗಳ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಈ ವಿಚಾರ ಖಾಸಗಿಯಾಗಿದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ವಶಕ್ಕೆ ಸಿಲುಕಿದ್ದ ಅಭಿನಂದನ್

2019ರ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಇದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಬಾಲಾಕೋಟ್‌ನಲ್ಲಿದ್ದ ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು.

ಈ ವೇಳೆ ಮಿಗ್-21 ಬೈಸನ್ ಯುದ್ಧವಿಮಾನದ ಪೈಲಟ್ ಆಗಿದ್ದ ಅಭಿನಂದನ್ ವರ್ಧಮಾನ್ ಅವರು ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಬಳಿಕ ಅವರ ವಿಮಾನ ಪಾಕಿಸ್ತಾನದ ಪ್ರದೇಶದಲ್ಲಿ ಪತನಗೊಂಡಿದ್ದು, ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ಪಡೆದಿತ್ತು.

ಮೂರು ದಿನಗಳಲ್ಲಿ ಭಾರತಕ್ಕೆ ವಾಪಸ್

ಪಾಕಿಸ್ತಾನದ ವಶದಲ್ಲಿದ್ದ ಅಭಿನಂದನ್ ಅವರನ್ನು ರಾಜತಾಂತ್ರಿಕ ಒತ್ತಡ ಹಾಗೂ ಮಾತುಕತೆಯ ಬಳಿಕ ಕೇವಲ ಮೂರು ದಿನಗಳಲ್ಲಿ ಭಾರತಕ್ಕೆ ಹಸ್ತಾಂತರಿಸಲಾಯಿತು. ಭಾರತಕ್ಕೆ ಮರಳಿದ ಬಳಿಕ ಅವರ ಶೌರ್ಯ ದೇಶಾದ್ಯಂತ ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು.

ಅಭಿನಂದನ್ ಅವರ ಧೈರ್ಯ ಮತ್ತು ಸಾಹಸವನ್ನು ಗುರುತಿಸಿ ಭಾರತ ಸರ್ಕಾರ ಅವರಿಗೆ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಿತ್ತು. ಪಾಕಿಸ್ತಾನದಲ್ಲಿ ಬಂಧನದಲ್ಲಿದ್ದ ವೇಳೆ ಅವರು ಚಹ ಸೇವಿಸುತ್ತಿರುವ ದೃಶ್ಯವೂ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ