LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಪರೀಕ್ಷೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಹೊಸದಿಲ್ಲಿ, ಆಗಸ್ಟ್ 1: ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರ ಅಕ್ರಮಗಳಿಗೆ ಕಠಿಣ ಶಿಕ್ಷೆ ವಿಧಿಸುವ ಉದ್ದೇಶದ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ಮಾರ್ಗಗಳ ತಡೆ) ತಿದ್ದುಪಡಿ ಕಾಯ್ದೆ, 2026ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಂಕಿತ ಹಾಕಿದ್ದಾರೆ.

ಈ ತಿದ್ದುಪಡಿ ಮಸೂದೆಗೆ ಗುರುವಾರ ತಡರಾತ್ರಿ ರಾಜ್ಯಸಭೆ ಸುದೀರ್ಘ ಚರ್ಚೆಯ ಬಳಿಕ ಅನುಮೋದನೆ ನೀಡಿತ್ತು. ಇದಕ್ಕೂ ಮುನ್ನ ಬುಧವಾರ ಲೋಕಸಭೆಯೂ ಮಸೂದೆಯನ್ನು ಅಂಗೀಕರಿಸಿತ್ತು.

ಸಂಘಟಿತ ಜಾಲಗಳು, ವ್ಯಕ್ತಿಗಳು ಹಾಗೂ ಸಂಸ್ಥೆಗಳು ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಅಕ್ರಮಗಳಲ್ಲಿ ತೊಡಗುವುದನ್ನು ತಡೆಯುವುದು ಮತ್ತು ಸಾರ್ವಜನಿಕ ಪರೀಕ್ಷೆಗಳ ಪಾವಿತ್ರ್ಯವನ್ನು ಕಾಪಾಡುವುದು ಈ ತಿದ್ದುಪಡಿ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ.

ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 2024ರಲ್ಲಿ ಜಾರಿಗೆ ತಂದಿದ್ದ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ಮಾರ್ಗಗಳ ತಡೆ) ಕಾಯ್ದೆಗೆ ಈ ತಿದ್ದುಪಡಿಗಳನ್ನು ತರಲಾಗಿದೆ.

ಈ ಕಾಯ್ದೆ ಜಾರಿಯಾಗುವ ಮೊದಲು ಕೇಂದ್ರ ಸರ್ಕಾರ ಹಾಗೂ ಅದರ ಅಧೀನ ಸಂಸ್ಥೆಗಳು ನಡೆಸುವ ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಮತ್ತು ಸಮಗ್ರ ಕಾನೂನು ಇರಲಿಲ್ಲ.

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ), ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ), ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ), ರೈಲ್ವೆ ನೇಮಕಾತಿ ಪರೀಕ್ಷೆಗಳು, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಸೇರಿದಂತೆ ಕೇಂದ್ರದ ವಿವಿಧ ಸಂಸ್ಥೆಗಳು ನಡೆಸುವ ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಯಲು ಈ ಕಾಯ್ದೆ ಅನ್ವಯವಾಗಲಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ