LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಾಗಲಕೋಟ ಜಿಲ್ಲೆಯಾದ್ಯಂತ ನಿಷೇಧಾಜ್ಞೆ, ಮದ್ಯ ಮಾರಾಟ ಬಂದ್ 

ಬಾಗಲಕೋಟ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಜಿಲ್ಲಾಧಿಕಾರಿಗಳ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಆಕ್ರೋಶ ಭುಗಿಲೆದ್ದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.



ಇಂದಿನಿಂದ ನ.19 ರ ಮಧ್ಯರಾತ್ರಿವರೆಗೆ ಬಾಗಲಕೋಟ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಬಾಗಲಕೋಟ ಜಿಲ್ಲಾಧಿಕಾರಿ ಪಿ ಸುನೀಲ ಕುಮಾರ ತಿಳಿಸಿದ್ದಾರೆ.



ಜೊತೆಗೆ ಬಾಗಲಕೋಟ ಜಿಲ್ಲಾದ್ಯಂತ ಇಂದಿನಿಂದ ನವೆಂಬರ 19 ರ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತದಿಂದ ಈ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.



ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆ ಇಂದು ಮುಧೋಳ ನಗರ ಬಂದ್ ಕರೆ ಕೂಡ ನೀಡಲಾಗಿತ್ತು.



ನಗರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ