LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಿಷೇಧಾಜ್ಞೆ ಜಾರಿ, ಮೊಬೈಲ್ ನಿರ್ಬಂಧ

ಬೆಳಗಾವಿ, ಜೂ.2(ಸಮದರ್ಶಿ ಸುದ್ದಿ): ಮಂಗಳವಾರ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ  ತಿಳಿಸಿದರು.



ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಬೆಳಗಾವಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿ ಭಾನುವಾರ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಅವರು ಮಾತನಾಡಿದರು.



ಮತ ಎಣಿಕೆ ಆರಂಭಕ್ಕೆ ಮುನ್ನ ಮತಯಂತ್ರ ಇರಿಸಿದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ ವೀಕ್ಷಕರು, ಉಮೇದುವಾರರು ಹಾಗೂ ಚುನಾವಣಾ ಎಜೆಂಟರುಗಳ ಸಮ್ಮುಖದಲ್ಲಿ ತೆರೆಯಲಾಗುವುದು.



ಬೆಳಿಗ್ಗೆ 8 ಗಂಟೆಯಿಂದ ಇವಿಎಂ ಮತ ಎಣಿಕೆ ಕಾರ್ಯ ಆರಂಭಿಸಲಾಗುವುದು. ಅಂಚೆ ಮತಗಳ ಎಣಿಕೆಗೆ ಎರಡು ಪ್ರತ್ಯೇಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

ತಾಂತ್ರಿಕ ತೊಂದರೆ ನಿರ್ವಹಣೆಗೆ ಭಾರತ ಚುನಾವಣಾ ಆಯೋಗವು ಎಂಟು ಜನ ತಂತ್ರಜ್ಞರನ್ನು ನಿಯೋಜಿಸಿದೆ.



ಇದುವರೆಗೆ ಪೋಸ್ಟಲ್ ಬ್ಯಾಲೆಟ್  ಮುಖಾಂತರ 11,148 ಮತಗಳು ಬಂದಿರುತ್ತವೆ. ಮತ ಎಣಿಕೆಯ ದಿನ ಬೆಳಿಗ್ಗೆ 8 ಗಂಟೆಯವರೆಗೂ ಪೋಸ್ಟಲ್ ಬ್ಯಾಲೆಟ್ ಗಳನ್ನು ಸ್ವೀಕರಿಸಲಾಗುತ್ತದೆ ಎಂದು ಅವರು ತಿಳಿಸಿದರು.



ಮತ ಎಣಿಕೆಗಾಗಿ ಒಟ್ಟಾರೆ 552 ಜನ ಮೇಲ್ವಿಚಾರಕು/ಮೈಕ್ರಾಒ ಅಬ್ಸರ್ವರ್ ಹಾಗೂ ಮತ ಎಣಿಕೆ ಸಿಬ್ಬಂದಿ ನಿಯೋಜಿಸಲಾಗಿರುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಜನರು ಹಾಗೂ ಮೂವರು ಹೆಚ್ಚುವರಿ ಸಿಬ್ಬಂದಿ ನೇಮಿಸಲಾಗಿರುತ್ತದೆ. ಮತ ಎಣಿಕಾ ಕೇಂದ್ರದಲ್ಲಿ ಉಪಸ್ಥಿತರಿರುವ ಎಜೆಂಟರಿಗೆ ನಮೂನೆ 7 ರಲ್ಲಿನ ಆದ್ಯತೆಯಂತೆ ಆಸನ ವ್ಯವಸ್ಥೆ ಕಲ್ಪಿಸಲಾಗುವುದು.



ಮೊಬೈಲ್, ಬೀಡಿ, ಸಿಗರೇಟ್ ನಿಷೇಧ:



ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಬಳಕೆಯನ್ನು ನಿರ್ಬಂಧಿಸಲಾಗಿರುತ್ತದೆ. ಇದಲ್ಲದೇ ತಂಬಾಕು, ಬೀಡಿ, ಸಿಗರೇಟ್, ಪಾನ್ ವಗೈರೆ ತರಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

ಮತ ಎಣಿಕೆ ಸಿಬ್ಬಂದಿಗೆ ಅಲ್ಪೋಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದ್ದು, ಅಭ್ಯರ್ಥಿಗಳು ಮತ್ತು ಎಜೆಂಟರುಗಳ ಅನುಕೂಲಕ್ಕಾಗಿ ಪೇಡ್ ಕ್ಯಾಂಟೀನ್ ತೆರೆಯಲಾಗಿರುತ್ತದೆ.



ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ:



ಮತ‌ ಎಣಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಇದಲ್ಲದೇ ಮತ ಎಣಿಕೆ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಕೂಡ‌ ಜಾರಿ ಮಾಡಲಾಗಿದ್ದು, ಈ ವ್ಯಾಪ್ತಿಯಲ್ಲಿ ಮೆರವಣಿಗೆ ಅಥವಾ ವಿಜಯೋತ್ಸವಕ್ಕೆ ಅವಕಾಶವಿರುವುದಿಲ್ಲ ಎಂದು ಹೇಳಿದರು.



ಶೇ.71.49 ರಷ್ಟು ಮತದಾನ:



02-ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಒಟ್ಟಾರೆ ಶೇ.71.49 ರಷ್ಟು ಮತದಾನವಾಗಿರುತ್ತದೆ. ಒಟ್ಟು 19,23,788 ಮತದಾರರ ಪೈಕಿ 13,75,383 ಜನರು ಮತ ಚಲಾಯಿಸಿರುತ್ತಾರೆ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸುಗಮ ಹಾಗೂ ಪಾರದರ್ಶಕ ಮತ ಎಣಿಕೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.



ಪೊಲೀಸ್ ಬಿಗಿ ಭದ್ರತೆ:



ಇದೇ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು, ಒಟ್ಟು ಐದು ಕೆಎಸ್ಆರ್ ಪಿ ಒಳಗೊಂಡಂತೆ ಬಿಗಿಭದ್ರತೆ ಕಲ್ಪಿಸಲಾಗುವುದು ಎಂದು ಹೇಳಿದರು.



ನಗರದಲ್ಲಿ 300 ಕಡೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಡ್ರೋನ್ ಮೂಲಕವೂ ನಿಗಾ ವಹಿಸಲಾಗುತ್ತದೆ.

ಮತ ಎಣಿಕೆ ಕೇಂದ್ರದಲ್ಲಿ ಇಬ್ಬರು ಡಿಸಿಪಿ ನೇತೃತ್ವದಲ್ಲಿ 13 ಇನ್ಸಪೆಕ್ಟರಗಳು ಕಾರ್ಯನಿರ್ವಹಿಸಲಿದ್ದಾರೆ. ಸುಗಮ ಸಂಚಾರ, ಪಾರ್ಕಿಂಗ್‌ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿರುತ್ತದೆ ಎಂದರು.



ಇದಾದ ಬಳಿಕ ಮತ ಎಣಿಕೆ ಕೊಠಡಿ, ಪಾರ್ಕಿಂಗ್, ಭದ್ರತಾ ಸಿಬ್ಬಂದಿ ನಿಯೋಜನೆ, ಊಟೋಪಹಾರ ವ್ಯವಸ್ಥೆ, ಮಾಧ್ಯಮ ಕೇಂದ್ರ ಮತ್ತಿತರ ಸೌಕರ್ಯಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಮತ್ತು ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮತ್ತಿತರ ಅಧಿಕಾರಿಗಳು ಪರಿಶೀಲಿಸಿದರು.



ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಲೋಕೇಶ ಪಿ.ಎನ್., ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ತಹಶೀಲ್ದಾರ ಸಿದ್ದರಾಯ ಭೋಸಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು