LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
International News

ಫ್ರಾನ್ಸನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 1,000 ಮಂದಿ ಬಂಧನ

ಪ್ಯಾರಿಸ್, ಅ.25: ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ, ಶಿಕ್ಷಣ ಹಾಗೂ ಸಾರ್ವಜನಿಕ ಸೇವೆಗಳಿಗೆ ಅನುದಾನ ಕಡಿತ ವಿರೋಧಿಸಿ ಫ್ರಾನ್ಸ್‌ನಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿವೆ. ಪ್ಯಾರಿಸ್ ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದ್ದು, ಸುಮಾರು 1,000 ಮಂದಿಯನ್ನು ಬಂಧಿಸಲಾಗಿದೆ.

ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಬಂಧಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಫ್ರಾನ್ಸ್ ಗೃಹ ಸಚಿವ ಲಾರೆಂಟ್ ನುನೆಜ್ ತಿಳಿಸಿದ್ದಾರೆ.

ಸರ್ಕಾರದ ಅಂದಾಜಿನ ಪ್ರಕಾರ ಸುಮಾರು 4.10 ಲಕ್ಷ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೆ, ಸಂಘಟಕರ ಪ್ರಕಾರ ಈ ಸಂಖ್ಯೆ 8 ಲಕ್ಷದಷ್ಟಿದೆ. ಕಳೆದ ವಾರ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿಯೂ ಹಿಂಸಾಚಾರ ಸಂಭವಿಸಿ 385 ಮಂದಿಯನ್ನು ಬಂಧಿಸಲಾಗಿತ್ತು.

ಪ್ಯಾರಿಸ್‌ನ ಕೋರ್ಸ್ ಡಿ ವಿನ್ಸೆನ್ನೆಸ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಪೊಲೀಸರತ್ತ ವಸ್ತುಗಳನ್ನು ಎಸೆದ ಹಿನ್ನೆಲೆಯಲ್ಲಿ ಅಶ್ರುವಾಯು ಹಾಗೂ ಜಲಫಿರಂಗಿಗಳನ್ನು ಬಳಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಹೆಲಿಕಾಪ್ಟರ್ ಮೂಲಕವೂ ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಿಯಾನ್, ಲಿಲ್, ಮಾರ್ಸಿಲ್ಲೆ, ಮಾಂಟ್‌ಪೆಲಿಯರ್, ನಾಂತೆಸ್ ಹಾಗೂ ಟೌಲೌಸ್ ನಗರಗಳಲ್ಲಿಯೂ ಪ್ರತಿಭಟನೆಗಳು ತೀವ್ರಗೊಂಡಿವೆ. ಲಿಯಾನ್‌ನಲ್ಲಿ ನಿಷೇಧಾಜ್ಞೆ ನಡುವೆಯೂ ಸುಮಾರು 10,000 ಮಂದಿ ಮೆರವಣಿಗೆ ನಡೆಸಿದ್ದು, ಟೌಲೌಸ್‌ನಲ್ಲಿ 26,000 ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪೊಲೀಸರ ಕ್ರಮವನ್ನು ಎಡಪಂಥೀಯ ನಾಯಕ ಜೀನ್ ಲ್ಯುಕ್ ಮೆಲೆಂಚೋನ್ ತೀವ್ರವಾಗಿ ಖಂಡಿಸಿದ್ದಾರೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ನಡೆಸಲಾಗುತ್ತಿದೆ. ಮಾಧ್ಯಮಗಳು ಪ್ರತಿಭಟನೆಯ ಹಿಂಸಾತ್ಮಕ ದೃಶ್ಯಗಳಿಗೆ ಮಾತ್ರ ಆದ್ಯತೆ ನೀಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫ್ರಾನ್ಸ್‌ನ ವಲಸೆ ನೀತಿಯನ್ನು ಟೀಕಿಸಿದ್ದು, ದೇಶದಲ್ಲಿ ಉಂಟಾಗಿರುವ ಅಶಾಂತಿಗೆ ವಲಸೆ ನೀತಿಯೂ ಕಾರಣ ಎಂದು ಪ್ರತಿಪಾದಿಸಿದ್ದಾರೆ.

ಶಿಕ್ಷಕರ ಕೊರತೆ, ಶಿಕ್ಷಣ ವ್ಯವಸ್ಥೆಯಲ್ಲಿನ ಅಸಮಾನತೆ ಹಾಗೂ ಸಾರ್ವಜನಿಕ ಸೇವೆಗಳ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಆರಂಭಿಸಿದ್ದ ಪ್ರತಿಭಟನೆಗೆ ಇದೀಗ ಕಾರ್ಮಿಕ ಸಂಘಟನೆಗಳು, ನಾಗರಿಕ ಹಕ್ಕುಗಳ ಸಂಘಟನೆಗಳು ಹಾಗೂ ‘ಯೆಲ್ಲೋ ವೆಸ್ಟ್ಸ್’ ಚಳವಳಿಯ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ಇದರಿಂದ ಪ್ರತಿಭಟನೆ ರಾಷ್ಟ್ರವ್ಯಾಪಿ ಚಳವಳಿಯಾಗಿ ವಿಸ್ತರಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆಸಾಹಿಲ್ ಸಾವಿನ ಪ್ರಕರಣ: ಐಐಟಿ ಬಾಂಬೆ ನಿರ್ದೇಶಕರ ರಾಜೀನಾಮೆಗೆ 84 ಸಂಘಟನೆಗಳ ಆಗ್ರಹಯುರೋಪ್‌ನ ಹಲವು ದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಾಚಾರಮತಗಳ್ಳತನ: ಅ.30ರಿಂದ ದೆಹಲಿಯಲ್ಲೇ ಇರುವಂತೆ ಕಾಂಗ್ರೆಸ್ ಸಂಸದರಿಗೆ ಖರ್ಗೆ ಸೂಚನೆಫ್ರಾನ್ಸನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 1,000 ಮಂದಿ ಬಂಧನನ.7ರವರೆಗೆ ರಿಯಾದ, ದಮ್ಮಾಮ ಹಾರಾಟ ರದ್ದುದೀಪಾವಳಿಗೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ ನೀಡಿ: ಪ್ರಧಾನಿ ಮೋದಿಡಿಸೆಂಬರ್ ಅಂತ್ಯ ಅಥವಾ ಜನವರಿಯಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ: ಈಶ್ವರ ಖಂಡ್ರೆಶಾಲಿನಿ ರಜನೀಶ ಸೇರಿ 6 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಕ್ರಮಕ್ಕೆ ಆಗ್ರಹ