LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ 

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.



15 ಸಾವಿರ ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದಾರೆ. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿವೆ.



ಈ ಕುರಿತಂತೆ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ದಿನಾಂಕ 21-03-2022ರಂದು ಅಧಿಸೂಚನೆ ಹೊರಡಿಸಲಾಗಿತ್ತು.



ಆನ್ ಲೈನ್ ಮೂಲಕ ದಿನಾಂಕ 21-03-2022 ರಿಂದ 22-04-2022ರವರೆಗೆ ಅವಕಾಶ ನೀಡಲಾಗಿತ್ತು ಎಂದು ಹೇಳಿದೆ.



ಇನ್ನೂ 15,000 ಶಾಲಾ ಶಿಕ್ಷಕರ ಹುದ್ದೆಗಳಿಗಾಗಿ ಒಟ್ಟು 1,16,223 ಮಂದಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 21-05-2022 ಹಾಗೂ 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ 68,849 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 51,098 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದರು ಎಂದು ತಿಳಿಸಿದೆ.



1:2 ಅನುಪಾತದಂತೆ 22,432 ಅಭ್ಯರ್ಥಿಗಳ ದಾಖಲಾತಿಯನ್ನು ಪರಿಶೀಲನೆ ನಡೆಸಲಾಯಿತು. ಇಂದು 1:1 ಅನುಪಾತದಂತೆ ಆಯ್ಕೆಯಾಗಿರುವಂತ 13,363 ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.



ಈ ತಾತ್ಕಾಲಿಕ ಆಯ್ಕೆ ಪಟ್ಟಿಯ ಬಗ್ಗೆ ಆಯಾ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಲು ದಿನಾಂಕ 19-11-2022 ರಿಂದ 23-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ. ಈ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು www.schooleducation.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ