ಬೆಳಗಾವಿ, ಜುಲೈ 7: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳು ಮತ್ತು ನಿಪ್ಪಾಣಿ ತಾಲ್ಲೂಕು ವ್ಯಾಪ್ತಿಯಲ್ಲಿನ ಎಲ್ಲ ಪಿಯುಸಿ ಹಾಗೂ ಸಮವರ್ತಿತ ಕಾಲೇಜುಗಳಿಗೂ ಸಹ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.