LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸ

ಹೊಸದಿಲ್ಲಿ, ಜೂ. 5 : ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗ್ರೇಟ್ ನಿಕೋಬಾರ್ ದ್ವೀಪಕ್ಕೆ ಭೇಟಿ ನೀಡಿದ ವೇಳೆ ಸಮುದ್ರದ ಹವಳದ ದಿಬ್ಬಗಳ ನಡುವೆ ಸ್ಕೂಬಾ ಡೈವಿಂಗ್ ನಡೆಸಿದ ವೀಡಿಯೊವನ್ನು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಾರತದ ದಕ್ಷಿಣ ತುದಿಯಾದ ಇಂದಿರಾ ಪಾಯಿಂಟ್‌ಗೆ ಇತ್ತೀಚೆಗೆ ಭೇಟಿ ನೀಡಿದ್ದ ವೇಳೆ ಈ ವೀಡಿಯೊ ಚಿತ್ರೀಕರಿಸಲಾಗಿದೆ. ಸಮುದ್ರದ ಆಳದಲ್ಲಿ ಹವಳದ ದಿಬ್ಬಗಳ ನಡುವೆ ರಾಹುಲ್ ಗಾಂಧಿ ಸ್ಕೂಬಾ ಡೈವಿಂಗ್ ನಡೆಸುತ್ತಿರುವ ದೃಶ್ಯಗಳು ವೀಡಿಯೊದಲ್ಲಿ ಕಾಣಿಸುತ್ತವೆ.

ವೀಡಿಯೊದೊಂದಿಗೆ ಸಂದೇಶ ಹಂಚಿಕೊಂಡಿರುವ ಅವರು, ಇಂದಿರಾ ಪಾಯಿಂಟ್‌ನಲ್ಲಿ ನಿಂತು ಶತಮಾನಗಳಷ್ಟು ಹಳೆಯ ಮರಗಳ ನಡುವೆ ಸಂಚರಿಸಿದ್ದೇನೆ. ಜಗತ್ತಿನ ಅತ್ಯಂತ ಸಮೃದ್ಧ ಜೀವವೈವಿಧ್ಯ ಹೊಂದಿರುವ ಹವಳದ ದಿಬ್ಬಗಳನ್ನು ವೀಕ್ಷಿಸಿದ್ದೇನೆ ಎಂದು ತಿಳಿಸಿದ್ದಾರೆ.

ಅಲ್ಲದೆ, ದ್ವೀಪದಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳು ಹಾಗೂ ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿರುವುದಾಗಿ ಹೇಳಿರುವ ಅವರು, ಈ ಪ್ರದೇಶದ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಗ್ರೇಟ್ ನಿಕೋಬಾರ್ ದ್ವೀಪದ ನೈಸರ್ಗಿಕ ಸಂಪತ್ತು, ಹವಳದ ದಿಬ್ಬಗಳು ಮತ್ತು ಸ್ಥಳೀಯ ಸಮುದಾಯಗಳ ರಕ್ಷಣೆಗೆ ಆದ್ಯತೆ ನೀಡಬೇಕೆಂದು ಅಭಿಪ್ರಾಯಪಟ್ಟಿರುವ ರಾಹುಲ್ ಗಾಂಧಿ, ಈ ದ್ವೀಪಗಳು ಸುಸ್ಥಿರ ಪ್ರವಾಸೋದ್ಯಮದ ಜಾಗತಿಕ ಮಾದರಿಯಾಗಿ ರೂಪುಗೊಳ್ಳುವ ಸಾಮರ್ಥ್ಯ ಹೊಂದಿವೆ ಎಂದು ತಿಳಿಸಿದ್ದಾರೆ.

ವಿಶ್ವ ಪರಿಸರ ದಿನದ ಅಂಗವಾಗಿ ಹಂಚಿಕೊಂಡಿರುವ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ