LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನವೆಂಬರ್ 15ರಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು, ನ. 11: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಒಣಹವೆಯ ನಡುವೆ ನವೆಂಬರ್ 15ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ನವೆಂಬರ್ 15 ಹಾಗೂ 16ರಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ತಿಳಿಸಿದೆ.

ನವೆಂಬರ್ 14ರವರೆಗೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ನಂತರ ಅರಬ್ಬಿ ಸಮುದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಿರುವ ವಾಯುಭಾರ ಚಲನೆಯ ಪರಿಣಾಮವಾಗಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಕೇರಳದ ದಕ್ಷಿಣ ಕರಾವಳಿಯಲ್ಲಿದ್ದ ಚಂಡಮಾರುತ ಪರಿಚಲನೆಯು ಆಗ್ನೇಯ ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದ ಸುತ್ತಮುತ್ತಲಿನ ಪ್ರದೇಶಕ್ಕೆ ಸ್ಥಳಾಂತರಗೊಂಡಿದೆ. ಇದೇ ವೇಳೆ ಮನ್ನಾರ್ ಕೊಲ್ಲಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿಯೂ ಮತ್ತೊಂದು ಚಂಡಮಾರುತ ಪರಿಚಲನೆ ಕಂಡುಬಂದಿದೆ.

ಈ ಹವಾಮಾನ ವ್ಯವಸ್ಥೆಗಳ ಪರಿಣಾಮವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ನವೆಂಬರ್ 15 ಮತ್ತು 16ರಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಆದರೆ ರಾಜ್ಯದ ಯಾವುದೇ ಭಾಗಕ್ಕೂ ಸದ್ಯಕ್ಕೆ ಭಾರಿ ಮಳೆ, ಗುಡುಗು ಸಹಿತ ಮಳೆ ಅಥವಾ ಬಿರುಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.

ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಒಣಹವೆ

ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ.

ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಉತ್ತರ ಕರ್ನಾಟಕದ ರೈತರಿಗೆ ಈ ಮುನ್ಸೂಚನೆ ನಿರಾಸೆ ಮೂಡಿಸುವಂತಿದೆ. ವಿಶೇಷವಾಗಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಿಂಗಾರು ಬಿತ್ತನೆಗೆ ಮಳೆಯ ಅಗತ್ಯವಿರುವ ಸಂದರ್ಭದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು.

ರಾಜ್ಯದಲ್ಲಿ ನವೆಂಬರ್ 14ರವರೆಗೆ ಒಣಹವೆ ಮುಂದುವರಿದು, 15ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮುನ್ಸೂಚನೆಯಲ್ಲಿ ಬದಲಾವಣೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು, ಶೋಷಿತರ ಆಕ್ರೋಶ: ಬೆಳಗಾವಿ ಅಧಿವೇಶನದಲ್ಲಿ ಭರವಸೆ ಈಡೇರಿಸಲು ಗಡುವುಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್