LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕ್ಷೇತ್ರ ಪುನರ್‌ವಿಂಗಡಣೆ: ನಿಲುವು ಬದಲಿಸಿದ ಡಿಎಂಕೆ

ಚೆನ್ನೈ, ನ. 28: ಕ್ಷೇತ್ರ ಪುನರ್‌ವಿಂಗಡಣೆಗೆ ಈ ಹಿಂದೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಇದೀಗ ತನ್ನ ನಿಲುವು ಬದಲಿಸಿದ್ದು, ನ. 30ರಂದು ಸಂಸತ್ತಿನಲ್ಲಿ ಮಂಡನೆಯಾಗಲಿರುವ ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಸಂಪೂರ್ಣ ಬೆಂಬಲ ಘೋಷಿಸಿದೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಒಟ್ಟು 30 ಸಂಸದರನ್ನು ಹೊಂದಿರುವ ಡಿಎಂಕೆಯ ಈ ನಿರ್ಧಾರ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದರ ಸಭೆಯಲ್ಲಿ ಮಸೂದೆ ಬೆಂಬಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಎಲ್ಲ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಏಕರೂಪವಾಗಿ ಶೇ. 50ರಷ್ಟು ಹೆಚ್ಚಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಿರುವುದರಿಂದ ಅದನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಡಿಎಂಕೆ ಸಂಸದ ಎ. ರಾಜಾ ತಿಳಿಸಿದ್ದಾರೆ.

ನ್ಯಾಯಸಮ್ಮತ ಕ್ಷೇತ್ರ ಪುನರ್‌ವಿಂಗಡಣೆಗೆ ನಮ್ಮ ಪಕ್ಷ ಮೊದಲಿನಿಂದಲೂ ಬೆಂಬಲ ನೀಡುತ್ತ ಬಂದಿದೆ. ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದಿಂದ ಹೊರಬಂದಿದ್ದರೂ ಈ ವಿಚಾರದಲ್ಲಿ ಪಕ್ಷದ ಮೂಲ ನಿಲುವು ಬದಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿಂದಿನ ನಿಲುವಿಗೆ ವ್ಯತಿರಿಕ್ತ ನಿರ್ಧಾರ

2025ರಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳ ಜಂಟಿ ಕ್ರಿಯಾ ಸಮಿತಿ ಸಭೆ ಆಯೋಜಿಸಿದ್ದ ಡಿಎಂಕೆ, ಕ್ಷೇತ್ರ ಪುನರ್‌ವಿಂಗಡಣೆಯನ್ನು ಇನ್ನೂ 25 ವರ್ಷಗಳ ಕಾಲ ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು. ಇದೀಗ ಮಸೂದೆಗೆ ಬೆಂಬಲ ಘೋಷಿಸುವ ಮೂಲಕ ತನ್ನ ಹಿಂದಿನ ನಿಲುವಿಗೆ ವ್ಯತಿರಿಕ್ತವಾದ ನಿರ್ಧಾರ ಕೈಗೊಂಡಿದೆ.

ಈ ಹಿಂದೆ ಲೋಕಸಭೆಯಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಯನ್ನು ವಿರೋಧಿಸಿದ್ದ ಡಿಎಂಕೆ ಸಂಸದೆ ಕನಿಮೊಳಿ, ಲೋಕಸಭೆಯ ಸದಸ್ಯಬಲವನ್ನು 816ಕ್ಕೆ ಹೆಚ್ಚಿಸಿದರೆ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಭಾವ ಕುಗ್ಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ತಮಿಳುನಾಡು, ಕೇರಳ, ಕರ್ನಾಟಕ, ಪಂಜಾಬ್, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳ ಬೆಂಬಲವಿಲ್ಲದೆಯೇ ಉತ್ತರ ಭಾರತದ ರಾಜ್ಯಗಳು ಸಂವಿಧಾನ ತಿದ್ದುಪಡಿಗೆ ಅಗತ್ಯವಿರುವ ಬಹುಮತದ ಸಮೀಪ ತಲುಪುವ ಸಾಧ್ಯತೆಯಿದೆ ಎಂದೂ ಅವರು ಎಚ್ಚರಿಸಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST