LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಸಂಜಯ ಗಾಂಧಿ ಹೆಸರಿನ ಸಂಸ್ಥೆಗಳ ಮರುನಾಮಕರಣ

ಪಾಟ್ನಾ, ಎ.30 : ಬಿಹಾರದ ಮುಖ್ಯಮಂತ್ರಿ ಸಾಮ್ರಾಟ ಚೌಧರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪಾಟ್ನಾದ ಸಂಜಯ ಗಾಂಧಿ ಜೈವಿಕ ಉದ್ಯಾನವನಕ್ಕೆ ಪಾಟ್ನಾ ಮೃಗಾಲಯ ಎಂದು ಹಾಗೂ ಸಂಜಯ್ ಗಾಂಧಿ ಡೈರಿ ತಂತ್ರಜ್ಞಾನ ಸಂಸ್ಥೆಗೆ ಬಿಹಾರ ರಾಜ್ಯ ಡೈರಿ ತಂತ್ರಜ್ಞಾನ ಸಂಸ್ಥೆ ಎಂದು ಮರುನಾಮಕರಣ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ.

1973ರಲ್ಲಿ ಆರಂಭಗೊಂಡ ಮೃಗಾಲಯಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುತ್ರ ಸಂಜಯ ಗಾಂಧಿ ಹೆಸರನ್ನು ನೀಡಲಾಗಿತ್ತು. ಸುಮಾರು 153 ಎಕರೆ ವಿಸ್ತಾರ ಹೊಂದಿರುವ ಈ ಮೃಗಾಲಯದಲ್ಲಿ 110ಕ್ಕೂ ಹೆಚ್ಚು ಪ್ರಭೇದಗಳ 800ಕ್ಕೂ ಅಧಿಕ ಪ್ರಾಣಿಗಳು ಸಂರಕ್ಷಣೆ ಪಡೆಯುತ್ತಿವೆ.

1980ರಲ್ಲಿ ಬಿಹಾರ ರಾಜ್ಯ ಸರಕಾರ ಸ್ಥಾಪಿಸಿದ್ದ ಸಂಜಯ್ ಗಾಂಧಿ ಡೈರಿ ತಂತ್ರಜ್ಞಾನ ಸಂಸ್ಥೆ ಐಸಿಎಆರ್ ಮಾನ್ಯತೆ ಪಡೆದ ಸಂಸ್ಥೆಯಾಗಿದ್ದು, ಇಲ್ಲಿ ಡೈರಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಿಟೆಕ್ ಮತ್ತು ಎಂಟೆಕ್ ಪದವಿಗಳನ್ನು ಬೋಧಿಸಲಾಗುತ್ತಿದೆ.

ಸಚಿವ ಸಂಪುಟ ಸಭೆಯಲ್ಲಿ ಒಟ್ಟು 61 ನಿರ್ಣಯಗಳಿಗೆ ಅನುಮೋದನೆ ನೀಡಲಾಗಿದ್ದು, ಅದರ ಭಾಗವಾಗಿ ಮುಖ್ಯಮಂತ್ರಿ ವಿದ್ಯುತ್ ಬಳಕೆ ಸಹಾಯ ಯೋಜನೆಗೆ 23,165 ಕೋಟಿ ರೂ. ಮಂಜೂರು ಮಾಡಲಾಗಿದೆ. ಈ ಯೋಜನೆಯಡಿ ಗೃಹೋಪಯೋಗಿ ವಿದ್ಯುತ್ ಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ವ್ಯವಸ್ಥೆ ಜಾರಿಯಲ್ಲಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ