LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬೆಳಗಾವಿ ಅಧಿವೇಶನದಲ್ಲೇ ಸದಾಶಿವ ವರದಿ ಮಂಡಿಸಲು ಮನವಿ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.



ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು ಮತ್ತು ಶಾಸಕರ ಸಭೆಯ ಬಳಿಕ ಅವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಒಳ ಮೀಸಲಾತಿ ಕುರಿತು ಚಿತ್ರದುರ್ಗ ನಗರದಲ್ಲಿ ಎಸ್ಸಿ-ಎಸ್ಟಿ ಸಮಾವೇಶ ನಡೆಸಲಾಗಿತ್ತು. ಆಗ ಹತ್ತು ಹಲವು ಘೋಷಣೆಗಳನ್ನು ಮಾಡಿದ್ದೆವು. ಅದರಲ್ಲಿ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿಯೇ ಸದನದ ಮುಂದಿಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ ಎಂದರು.



ಸಚಿವರಾದ ಪ್ರಿಯಾಂಕ ಖರ್ಗೆ. ಡಾ. ಎಚ್ಸಿ ಮಹದೇವಪ್ಪ, ಕೆಎಚ್ ಮುನಿಯಪ್ಪ ಮತ್ತು ನಮ್ಮಲ್ಲಿ ಕೆಲವರು ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಬಗ್ಗೆ ಸಮಾಜದ ಮುಖಂಡರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.



ನ್ಯಾ. ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಸೋಮವಾರ ಕರೆ ನೀಡಿದ್ದರುಸದಾಶಿವ ಆಯೋಗದ ಶಿಫಾರಸು ಜಾರಿಗಾಗಿ ತೀವ್ರ ಆಂದೋಲನದ ಅಗತ್ಯವಿದೆ. ನಿಮ್ಮ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಿ. ಅವರಿಗೆ ಕಾರ್ಯಕ್ರಮಗಳನ್ನು ನಡೆಸಲು ಬಿಡಬೇಡಿ. ಸಚಿವನಾಗಿದ್ದುಕೊಂಡೇ ನಾನು ನಿಮಗೆ ರೀತಿ ಹೇಳುತ್ತಿದ್ದೇನೆ ಎಂದು ಕರ್ನಾಟಕ ಆದಿಜಾಂಬವ ಸಾಂಸ್ಕೃತಿಕ ಸಮಿತಿಯ ಮುಖಂಡರ ಸಭೆಯಲ್ಲಿ ಮುನಿಯಪ್ಪ ಅವರು ತಮ್ಮ ಭಾಷಣದಲ್ಲಿ ಹೇಳಿದ್ದರು.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ