LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ರೂಪಾಯಿ ಮೌಲ್ಯ ಮತ್ತೆ ಇಳಿಕೆ

ಹೊಸದಿಲ್ಲಿ, ಮೇ 11 : ಅಮೆರಿಕದ ಶಾಂತಿ ಪ್ರಸ್ತಾವನೆಗೆ ಇರಾನ್ ನೀಡಿದ ಪ್ರತಿಕ್ರಿಯೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿ ಹಾಕಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಿದ್ದು, ಇದರ ಪರಿಣಾಮವಾಗಿ ಕಚ್ಚಾ ತೈಲದ ಬೆಲೆ ಕ್ಷಿಪ್ರವಾಗಿ ಏರಿಕೆಯಾಗಿದೆ. ಇದರ ನೇರ ಪರಿಣಾಮ ಭಾರತೀಯ ವಿದೇಶಿ ವಿನಿಮಯ ಮಾರುಕಟ್ಟೆಯ ಮೇಲೂ ಕಂಡುಬಂದಿದ್ದು, ರೂಪಾಯಿ ಮೌಲ್ಯವು ಸೋಮವಾರ ಆರಂಭಿಕ ವಹಿವಾಟಿನಲ್ಲೇ ಭಾರೀ ಕುಸಿತ ಕಂಡಿದೆ.

ಅಂತರ ಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯವು 139 ಪೈಸೆ ಕುಸಿದು 94.90 ರೂ. ಮಟ್ಟಕ್ಕೆ ತಲುಪಿದೆ. ಬೆಳಗಿನ ವಹಿವಾಟಿನ ಆರಂಭದಲ್ಲಿ ರೂಪಾಯಿ 94.97 ರೂ. ಮಟ್ಟದಲ್ಲಿ ಆರಂಭಗೊಂಡಿದ್ದು, ಬಳಿಕ ಸ್ವಲ್ಪ ಚೇತರಿಕೆ ಕಂಡರೂ ನಷ್ಟದಿಂದ ಹೊರಬರಲಿಲ್ಲ.

ವಿದೇಶಿ ವಿನಿಮಯ ವ್ಯಾಪಾರಿಗಳ ಪ್ರಕಾರ, ಪಶ್ಚಿಮ ಏಶ್ಯದಲ್ಲಿ ಮತ್ತೆ ತೀವ್ರಗೊಂಡಿರುವ ಉದ್ವಿಗ್ನತೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳತ್ತ ಮುಖ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಡಾಲರ್ ಬಲಿಷ್ಠಗೊಂಡಿದ್ದು, ಇದರ ಪರಿಣಾಮವಾಗಿ ರೂಪಾಯಿ ಸೇರಿದಂತೆ ಏಶ್ಯಾದ ಅನೇಕ ಕರೆನ್ಸಿಗಳ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಇದರ ಜೊತೆಗೆ ವಿದೇಶಿ ಹೂಡಿಕೆದಾರರು ಭಾರತೀಯ ಷೇರು ಮಾರುಕಟ್ಟೆಯಿಂದ ಹಣ ಹಿಂಪಡೆಯುತ್ತಿರುವುದೂ ರೂಪಾಯಿ ಮೌಲ್ಯ ಕುಸಿತಕ್ಕೆ ಮತ್ತೊಂದು ಪ್ರಮುಖ ಕಾರಣವಾಗಿದೆ. ಕಚ್ಚಾ ತೈಲದ ಬೆಲೆ ಏರಿಕೆಯಿಂದ ಭಾರತಂಥ ತೈಲ ಆಮದು ಅವಲಂಬಿತ ರಾಷ್ಟ್ರಗಳಿಗೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಉತ್ತಮ ಚೇತರಿಕೆ ಕಂಡು ಪ್ರತಿ ಡಾಲರ್ ಎದುರು 71 ಪೈಸೆ ಏರಿಕೆಯಾಗಿತ್ತು. ಆ ದಿನದ ವಹಿವಾಟು 93.51 ರೂ. ಮಟ್ಟದಲ್ಲಿ ಅಂತ್ಯಗೊಂಡಿತ್ತು. ಆದರೆ ವಾರದ ಮೊದಲ ದಿನವೇ ಜಾಗತಿಕ ಬೆಳವಣಿಗೆಗಳ ಪರಿಣಾಮವಾಗಿ ರೂಪಾಯಿ ಮತ್ತೆ ತೀವ್ರ ಕುಸಿತದ ಹಾದಿ ಹಿಡಿದಿದೆ.

ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲದ ಬೆಲೆ ಏರಿಕೆ ಮುಂದುವರಿದರೆ ಮುಂದಿನ ದಿನಗಳಲ್ಲಿ ರೂಪಾಯಿ ಮೌಲ್ಯದ ಮೇಲೆ ಇನ್ನಷ್ಟು ಒತ್ತಡ ಹೆಚ್ಚುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ