LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸುದ್ದಿ, ಹೇಳಿಕೆಗಳನ್ನು ಯಥಾವತ್ತಾಗಿ ವರದಿ ಮಾಡಿ ವೃತ್ತಿಯ ಘನತೆ ಕಾಪಾಡಿ: ಪತ್ರಕರ್ತರಿಗೆ ಸತೀಶ ಜಾರಕಿಹೊಳಿ ಕಿವಿಮಾತು

ಬೆಳಗಾವಿ, ನ.11 : ಸಮಾಜದಲ್ಲಿ ತೊಂದರೆ, ಸಮಸ್ಯೆಗಳಿದ್ದಲ್ಲಿ ಅಂತಹ ಕಡೆ ಬೆಳಕು ಚೆಲ್ಲುವ ಕೆಲಸಕ್ಕೆ ಪತ್ರಿಕಾರಂಗ ಮುಂದಾಗಬೇಕು. ಪತ್ರಕರ್ತರು ತಮ್ಮ ನೈಜ ವರದಿಗಳಿಂದ ವೃತ್ತಿಯ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.



ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ನಗರದ ಕನ್ನಡ ಭವನದಲ್ಲಿ ಶನಿವಾರ ನಡೆದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ಎಲೆಕ್ಟ್ರಾನಿಕ ಹಾಗೂ ಡಿಜಿಟಲ್ ಮಾಧ್ಯಮಗಳ ಸುದ್ದಿ ಭರಾಟೆಯಿಂದ ಮೂಲ ಸುದ್ದಿಯ ಸ್ವರೂಪವೇ ಬದಲಾಗಿ ಕೆಲವೊಮ್ಮೆ ಬೇರೆಯದೇ ಅರ್ಥ ಮೂಡಿಸುತ್ತಿದೆ. ಆದ್ದರಿಂದ ಮೂಲ ಸುದ್ದಿ ಅಥವಾ ಹೇಳಿಕೆಗಳು ಯಥಾವತ್ತಾಗಿ ವರದಿಯಾಗಬೇಕು ಎಂದು ಹೇಳಿದರು.



ಬೆಳಗಾವಿ ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳ ಜತೆಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ. ಸ್ಥಳದ ಗೊಂದಲವಿರುವ ಕಾರಣ ವಿಳಂಬವಾಗಿದೆ. ಸ್ಥಳ ನಿಗದಿಯಾದ ತಕ್ಷಣವೇ ಭವನ ನಿರ್ಮಾಣಕ್ಕೆ ಸೂಚಿಸಲಾಗುವುದು ಎಂದು ಸತೀಶ ಜಾರಕಿಹೊಳಿ ಭರವಸೆ ನೀಡಿದರು.



ಇದಕ್ಕೂ ಮುಂಚೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ಪ್ರಭಾಕರ ಅವರು ಮಾತನಾಡಿ, ಬೆಳಗಾವಿ ಜಿಲ್ಲೆ ಅತೀ ವಿಶೇಷವಾದ ಜಿಲ್ಲೆಯಾಗಿದೆ. ಇಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಿರುವುದು ಸಂತಸದ ವಿಷಯ. ಈ ಅಭಿನಂದನಾ ಕಾರ್ಯಕ್ರಮವನ್ನು ಎಲ್ಲ ಪತ್ರಕರ್ತ ಮಿತ್ರರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.



ಈ ದಿನದಲ್ಲಿ ವಿಶೇಷವಾಗಿ ಪತ್ರಿಕಾ ವಿತರಕರನ್ನು ಸ್ಮರಿಸುತ್ತೇನೆ. ದಿನ ಬೆಳಿಗ್ಗೆ ಚಳಿ, ಮಳೆ, ಗಾಳಿ ಯಾವುದೇ ಲೆಕ್ಕಿಸದೇ ಮನೆ ಮನೆಗೆ ಪತ್ರಿಕೆಗಳನ್ನು ತಲುಪಿಸುವ ಕೆಲಸ ಅವರು ಪ್ರಾಮಾಣಿಕ, ನಿಷ್ಠೆಯಿಂದ ಮಾಡುತ್ತಾರೆ. ಹಾಗಾಗಿ ಈ ಬಾರಿ ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸುಮಾರು 76 ವರ್ಷದ ಜವರಪ್ಪ ಎಂಬ ಪತ್ರಿಕಾ ವಿತರಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿ ಗೌರವಿಸಿದ್ದಾರೆ ಎಂದು ಅವರು ಹೇಳಿದರು.



ಪತ್ರಕರ್ತರಿಗೆ ನಿವೇಶನ ಮೀಸಲಿಡುವುದು ಹಾಗೂ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸುವೆ. ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಯಾಗಿ ಸರಕಾರದ ಮಟ್ಟದಲ್ಲಿ ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸುತ್ತೇನೆ ಎಂದು ಕೆ. ಪ್ರಭಾಕರ ತಿಳಿಸಿದರು.



ನಿವೃತ್ತ ಪತ್ರಕರ್ತರ ಮಾಶಾಸನ 10 ರಿಂದ 12 ಸಾವಿರ ಹೆಚ್ಚಳ ಮಾಡಲಾಗಿದೆ. ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ ಬಡಾವಣೆಯಾದ ಕಣಬರ್ಗಿಯಲ್ಲಿ ನಿವೇಶನ ಮಂಜೂರು ಮಾಡಲು ಸದ್ಯದಲ್ಲೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.



ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ (ರಾಜು) ಸೇಠ ಅವರು ಈ ಸಂದರ್ಭದಲ್ಲಿ ಮಾತನಾಡಿ, ಪತ್ರಕರ್ತರು ಯಾವುದೇ ಸಮುದಾಯ ಹಾಗೂ ಪಕ್ಷದ ಪರವಾಗಿ ವರದಿಗಳನ್ನು ಮಾಡದೇ ಸಮಾಜಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ  ಸತ್ಯ, ನ್ಯಾಯ, ನೀತಿಯಂತೆ ಪಾರದರ್ಶಕವಾಗಿ ವರದಿ ಮಾಡಬೇಕು ಎಂದು ತಿಳಿಸಿದರು.



ಪತ್ರಿಕಾ ರಂಗದಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿ ನಿರ್ವಹಿಸುತ್ತಾರೆ. ಅದರಲ್ಲೂ ಪತ್ರಿಕಾ ವಿತರಕರಿಗೆ ಬಹಳ ಜವಾಬ್ದಾರಿಯಿದೆ. ಅದಕ್ಕೆ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರ ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನಿಸಿ, ಪತ್ರಿಕಾರಂಗಕ್ಕೆ ಗೌರವ ಸಲ್ಲಿಸಿದೆ. ಪತ್ರಕರ್ತರದ್ದು ಬಹಳ ಕಷ್ಟದ ಜೀವನ. ಅವರ ಬೇಡಿಕೆಗಳು, ಸಮಸ್ಯೆಗಳಿಗೆ ಸರಕಾರ ಸ್ಪಂದಿಸುತ್ತಿರುವದು ಹೆಮ್ಮೆಯ ಸಂಗತಿ ಎಂದು ಗದಗದ ತೋಂಟದಾರ್ಯ ಮಠದ ಶ್ರೀಗಳಾದ ತೋಂಟದ ಡಾ.ಸಿದ್ದರಾಮ ಸ್ವಾಮೀಜಿ ಹೇಳಿದರು.



ತೊಂದರೆಯಲ್ಲಿರುವ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಆರ್ಥಿಕ ನೆರವು ನೀಡಲಾಗುವುದು. ಹಳ್ಳಿಯಿಂದ ಬಂದಿರುವ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಪತ್ರಿಕಾ ವಿತರಕರಿಗೆ ಸನ್ಮಾನ, ಅನಾರೋಗ್ಯದಿಂದ  ಇರುವ ಪತ್ರಕರ್ತರಿಗೆ ಸಹಾಯ ಮಾಡಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ ಕುರಂದವಾಡೆ ಹೇಳಿದರು.



20 ವರ್ಷಗಳ ಹಿಂದೆ ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪತ್ರಕರ್ತರಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಆದರೆ ನಂತರ ಈ ವರೆಗೆ ಯಾವುದೇ ನಿವೇಶನಗಳು ಅವರಿಗೆ ನೀಡಲಿಲ್ಲ. ನಗರದಲ್ಲಿ 5 ಪ್ರತಿಶತ ಪತ್ರಕರ್ತರಿಗೆ ನಿವೇಶನ ಹಂಚಿಕೆ ಹಾಗೂ ನಗರದಲ್ಲಿ ಪತ್ರಕರ್ತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಸತಿ ನಿಲಯಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದರು.



ಇದಕ್ಕೂ ಮೊದಲು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಗೌರವಿಸಿ, ಅಭಿನಂದಿಸಲಾಯಿತು.



ಇದೇ ವೇಳೆ ಮುಖ್ಯಮಂತ್ರಿಗಳ ಕಚೇರಿಯ ಗಿರೀಶ ಕೆ., ಕೆ.ಪಿ.ಪುಟ್ಟಸ್ವಾಮಯ್ಯ, ದೀಪಕ ಕರಾಡೆ ಅವರನ್ನು ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ವಿಶೇಷ ಕರ್ತವ್ಯಾಧಿಕಾರಿ ಎಂ.ಕೆ.ಹೆಗಡೆ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ವಿವಿಧ ಪತ್ರಿಕೆಗಳ ಜಿಲ್ಲಾ ವರದಿಗಾರರು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರನ್ನೂ ಗೌರವಿಸಲಾಯಿತು.



ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು  ಜಿಲ್ಲೆಯಿಂದ ಆಗಮಿಸಿದ ವಿವಿಧ ತಾಲೂಕಾ ಪತ್ರಿಕಾ ವಿತರಕರಿಗೆ ಸೈಕಲ್ ವಿತರಣೆ ಮಾಡಿದರು.



ಕ. ಕಾ.ಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ನ್ಯಾಷನಲ್ ಇಂಟರ್ ಪೀಟರ್ ಶ್ರೀಲಂಕಾದ ಶುಭಾ ರತ್ನಾಯಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಸರ್ವೋತ್ತಮ ಜಾರಕಿಹೊಳಿ, ಕ.ಕಾ.ಪ.ಸಂಘದ ಉಪಾಧ್ಯಕ್ಷ ರಾಜಶೇಖರ ಪಾಟೀಲ, ಯಲ್ಲಪ್ಪ ತಳವಾರ, ಶ್ರೀಶೈಲ ಮಠದ, ಪ್ರಧಾನ ಕಾರ್ಯದರ್ಶಿ ಅರುಣ ಪಾಟೀಲ, ಕಾರ್ಯದರ್ಶಿ ಶ್ರೀಕಾಂತ ಕುಬಕಡ್ಡಿ, ಈಶ್ವರ ಹೋಟಿ, ತಾನಾಜಿರಾವ್ ಮೂರಂಕರ, ಖಜಾಂಚಿ ಚೇತನ ಹೊಳೆಪ್ಪಗೋಳ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಗೊಂದಿ, ನಾಮ ನಿರ್ದೇಶಿತ ಸದಸ್ಯ ಮಂಜುನಾಥ ಪಾಟೀಲ, ನೌಶಾದ ಬಿಜಾಪುರ ಸೇರಿದಂತೆ ಜಿಲ್ಲಾ ವಿವಿಧಡೆಯಿಂದ ಆಗಮಿಸಿದ ಪತ್ರಕರ್ತರು, ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ರೆಡ್ಡಿ ಗೊಂದಳಿ ಅವರು ಸ್ವಾಗತ ಕೋರಿದರು. ಐಶ್ವರ್ಯ ನಿರೂಪಿಸಿ ವಂದಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು