LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರೀತಿ ಕಾಮಕರ ‌ಮಹಾಪೌರ, ಕೊಂಗಾಲಿ ಉಪ ಮಹಾಪೌರ ಆಯ್ಕೆ ಬಹುತೇಕ ಖಚಿತ

ಬೆಳಗಾವಿ, ಮಾ. 18 : ಬೆಳಗಾವಿ ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮಹಾಪೌರರಾಗಿ ಪ್ರೀತಿ ಕಾಮಕರ ಹಾಗೂ ಉಪ ಮಹಾಪೌರರಾಗಿ ಹನುಮಂತ ಕೊಂಗಾಲಿ ಅವರನ್ನು ಆಯ್ಕೆ ಮಾಡುವ ಬಗ್ಗೆ ನಗರ ಬಿಜೆಪಿ ಘಟಕ ನಿರ್ಧಾರ ಕೈಗೊಂಡಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.


ಪಕ್ಷದ ಪದಾಧಿಕಾರಿಗಳ ಸಹಮತದೊಂದಿಗೆ ಹಾಗೂ ಸಮಾಜದ ಎಲ್ಲಾ ವರ್ಗಗಳ ವಿಶ್ವಾಸವನ್ನು ಗಳಿಸುವ ಉದ್ದೇಶದಿಂದ ಈ ಆಯ್ಕೆ ಮಾಡಲಾಗಿದೆ. ಇದಕ್ಕೆ ಪಕ್ಷದ ಎಲ್ಲಾ ನಗರ ಸೇವಕರ ಒಪ್ಪಿಗೆಯೂ ಇದೆ ಎಂದು ಅವರು ಹೇಳಿದರು.


ಬುಧವಾರ ಪಾಲಿಕೆಯಲ್ಲಿ ನಡೆದ ತುರ್ತು ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಬೆಳಗಾವಿ ನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ ಮಾತನಾಡಿ, ಮಹಾಪೌರ ಹಾಗೂ ಉಪ ಮಹಾಪೌರ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದರು. ವಾರ್ಡ ಸಂಖ್ಯೆ 21ರ ನಗರ ಸೇವಕಿ ಪ್ರೀತಿ ಕಾಮಕರ ಅವರನ್ನು ಮಹಾಪೌರರಾಗಿ ಮತ್ತು ವಾರ್ಡ ಸಂಖ್ಯೆ 46ರ ನಗರ ಸೇವಕ ಹನುಮಂತ ಕೊಂಗಾಲಿ ಅವರನ್ನು ಉಪ ಮಹಾಪೌರರಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ಉಪ ಮಹಾಪೌರ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ವಾರ್ಡ ಸಂಖ್ಯೆ 06ರ ನಗರ ಸೇವಕ ಸಂತೋಷ ಪೇಡನೇಕರ ಅವರನ್ನು ಪಾಲಿಕೆಯ ಆಡಳಿತ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ