LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶುಭಂ ಶೇಳಕೆಯೊಂದಿಗೆ ಸೆಲ್ಫಿ : ಕೊನೆಗೂ ಸಿಪಿಐ ಕಾಲಿಮಿರ್ಚಿ ಎತ್ತಂಗಡಿ

ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೇಳಕೆ ಜೊತೆಗೆ ಸೆಲ್ಫಿ  ಕ್ಲಿಕ್ಕಿಸಿಕೊಂಡು ವಿವಾದಕ್ಕೊಳಗಾಗಿದ್ದ ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಅವರನ್ನು ಸ್ಥಳ ನಿಗದಿಪಡಿಸದೇ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಸಿಇಎನ್ ಇನ್ಸಪೆಕ್ಟರ್ ಬಿ ಆರ್ ಗಡ್ಡೇಕರ ಅವರನ್ನು ವರ್ಗಾಯಿಸಿದೆ.



ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್ ಕರಾಳ ದಿನ ಮೆರವಣಿಗೆ ಆರಂಭಕ್ಕೂ ಮೊದಲು ಸಂಭಾಜಿ ಉದ್ಯಾನದಲ್ಲಿ  ಶುಭಂ ಶೇಳಕೆ ಜೊತೆಗೆ ಇನ್ಸಪೆಕ್ಟರ್ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಆ ಪೋಟೋ ಕೂಡಾ  ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗಿದ್ದು ಅವರ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರವು ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಅವರನ್ನು  ಹುದ್ದೆ ತೋರಿಸದೇ ಎತ್ತಂಗಡಿ ಮಾಡಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು