LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಿವಸೇನೆ, ಎಂಇಎಸ್ ಮುಖಂಡರಿಗೆ ಬೆಳಗಾವಿ ಪ್ರವೇಶ ನಿಷೇಧ

ಕರಾಳ ದಿನಾಚರಣೆಗೆ ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ

ಬೆಳಗಾವಿ, ಅ. 30: ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ಮಹಾರಾಷ್ಟ್ರದ ಶಿವಸೇನೆ (ಉದ್ಧವ ಠಾಕ್ರೆ ಬಣ) ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ಬೆಳಗಾವಿ ಜಿಲ್ಲೆ ಪ್ರವೇಶಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಎಂಇಎಸ್ ಆಯೋಜಿಸಲು ಉದ್ದೇಶಿಸಿರುವ ಕರಾಳ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕೊಲ್ಲಾಪುರ ಜಿಲ್ಲೆಯ ಶಿವಸೇನೆ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗಾವಿಗೆ ಆಗಮಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಬಂಧ ವಿಧಿಸಲಾಗಿದೆ.

ಕೊಲ್ಲಾಪುರ ಜಿಲ್ಲಾ ಶಿವಸೇನೆ ಅಧ್ಯಕ್ಷ ವಿಜಯ ಶಾಮರಾವ್ ದೇವಣೆ ನೇತೃತ್ವದಲ್ಲಿ ಸುಮಾರು 25 ಮಂದಿ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ನಿಪ್ಪಾಣಿ ಮಾರ್ಗವಾಗಿ ಬೆಳಗಾವಿ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಗಳು ಅಥವಾ ಹೇಳಿಕೆಗಳಿಂದ ಕನ್ನಡ ಮತ್ತು ಮರಾಠಿ ಭಾಷಿಕರ ನಡುವೆ ಉದ್ವಿಗ್ನತೆ ಉಂಟಾಗಬಹುದು. ಇದರಿಂದ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಆತಂಕವಿದೆ ಎಂದು ಪೊಲೀಸ್ ವರದಿಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅಡಿಯಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಕೊಲ್ಲಾಪುರ ಜಿಲ್ಲಾ ಶಿವಸೇನೆ ಅಧ್ಯಕ್ಷ ವಿಜಯ ಶಾಮರಾವ್ ದೇವಣೆ, ಶಿವಸೇನೆ ಉಪಾಧ್ಯಕ್ಷ ಸಂಜಯ ಪೂವಾರ್, ಕೊಲ್ಲಾಪುರ ನಗರ ಪ್ರಮುಖ ಸುನೀಲ ಮೋದಿ, ಶಿವಸೇನೆ ಗ್ರಾಮೀಣ ಜಿಲ್ಲಾ ಪ್ರಮುಖ ಸುನೀಲ ಶಿಂತ್ರೆ, ಕೊಲ್ಲಾಪುರ ನಗರ ಪ್ರಮುಖ ವಿಶಾಲ ದೇವಕುಳೆ ಹಾಗೂ ಕೊಲ್ಲಾಪುರ ಜಿಲ್ಲಾ ನಗರ ಪ್ರಮುಖ ಮಂಜೀತ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶ ನಿಷೇಧಿಸಲಾಗಿದೆ.

ಇವರೊಂದಿಗೆ ಆಗಮಿಸುವ ಇತರ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರಿಗೂ ನಿರ್ಬಂಧ ಅನ್ವಯವಾಗಲಿದೆ.  ನಿಪ್ಪಾಣಿ–ಕೋಗನೊಳ್ಳಿ ಮಾರ್ಗವಾಗಿ ಈ ಮುಖಂಡರು ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇರುವುದರಿಂದ ಗಡಿಭಾಗದಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವಸೇನೆ, ಎಂಇಎಸ್ ಮುಖಂಡರಿಗೆ ಬೆಳಗಾವಿ ಪ್ರವೇಶ ನಿಷೇಧತಮಿಳುನಾಡಿನಲ್ಲಿ ಸರ್ಕಾರಿ ಉದ್ಯೋಗದ ವಯೋಮಿತಿ 5 ವರ್ಷ ಹೆಚ್ಚಳನ್ಯಾಯಾಂಗ ಟೀಕಿಸಿದ ಸೌರವ ದಾಸ್ ವಿರುದ್ಧ ತನಿಖೆಗೆ ಅರ್ಜಿ192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತದಾರರ ಹೆಸರು ಅಳಿಕೆ!ರೈತರ ಹೆದ್ದಾರಿ ಬಂದ್‌ಗೆ ಜಿಲ್ಲಾಡಳಿತ ನಿರ್ಬಂಧರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಬೆಳಗಾವಿಯ ಮೂವರು ಸೇರಿ 71 ಸಾಧಕರಿಗೆ ಗೌರವಗುಜರಾತ್‌ನಲ್ಲಿ ₹14,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆಜ್ಞಾನೇಶ ಕುಮಾರ ವಿರುದ್ಧದ ಸಾರ್ವಜನಿಕ ವಾಗ್ದಂಡನೆ ಶನಿವಾರಕ್ಕೆ ಮುಂದೂಡಿಕೆಹೆಲಿಕಾಪ್ಟರ್ ದುರಂತ: ಅಥಣಿ ತಾಲೂಕಿನ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ಆರು ಮಂದಿ ಸಾವುಉತ್ತರ ಕರ್ನಾಟಕದ ಹಿರಿಯ ಚೇತನ, ಮುತ್ಸದ್ದಿ ಶಿವಾನಂದ ಕೌಜಲಗಿ ಇನ್ನಿಲ್ಲ