LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿಜೆಪಿ ಹೊರತು ಎಲ್ಲಾ ಆರೋಪಿಗಳಿಗೆ ಪೊಕ್ಸೊ ಅನ್ವಯಿಸುತ್ತದೆಯೇ? -ಸಿಬಲ್ ಪ್ರಶ್ನೆ

ಹೊಸದಿಲ್ಲಿ, ೩೧- ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳದ ಆರೋಪದ ವಿಚಾರವಾಗಿ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು ಕೇಂದ್ರದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಪೋಕ್ಸೊ ಕಾಯ್ದೆ ಮತ್ತು ತಕ್ಷಣದ ಬಂಧನವು ಬಿಜೆಪಿ ಹೊರತುಪಡಿಸಿ ದೇಶದ ಇತರ ಎಲ್ಲಾ ಆರೋಪಿಗಳಿಗೆ ಮಾತ್ರ ಅನ್ವಯಿಸುತ್ತದೆಯೇ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.



ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ.  "ಪೋಕ್ಸೊ ಅರ್ಜಿ ಮತ್ತು 164 ಹೇಳಿಕೆಗಳ ನಂತರ ತಕ್ಷಣದ ಬಂಧನವು ಬ್ರಿಜ್ ಭೂಷಣ್ ಹೊರತುಪಡಿಸಿ ಎಲ್ಲಾ ಆರೋಪಿಗಳಿಗೆ ಅನ್ವಯಿಸುತ್ತದೆಯೇ? ಏಕೆಂದರೆ ಅವರು: 1) ಬಿಜೆಪಿಗೆ ಸೇರಿದವರು 2) ಅವರಿಗೆ ಐಕಾನಿಕ್ ಮಹಿಳಾ ಕುಸ್ತಿಪಟುಗಳು ಬೇಕಾಗಿಲ್ಲ; ಮತಗಳು ಮಾತ್ರ ಮುಖ್ಯ  3) ಸರ್ಕಾರಕ್ಕೆ ಕಾಳಜಿ ಇಲ್ಲ. ಇದು ನನ್ನ ಹೊಸ ಭಾರತವೇ?” ಎಂದು ಕೇಳಿದ್ದಾರೆ.



ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲಿಕ್ ಮತ್ತು ವಿನೇಶ ಫೋಗಟ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗು ಬಿಜೆಪಿ ಸಂಸದ ಬ್ರಿಜ್ ಭೂಷಣ ಶರಣ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಮತ್ತು ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ದೆಹಲಿ ಪೊಲೀಸರಿಗೆ ಸುಪ್ರೀಮ ಕೋರ್ಟ ನೋಟಿಸ್ ನೀಡಿದ ಬಳಿಕ ಮಾತ್ರ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.



ಮೊದಲ ಎಫ್‌ಐಆರ್ ಅಪ್ರಾಪ್ತ ಕ್ರೀಡಾಪಟುವಿನ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದ್ದು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿಯಲ್ಲಿ ಪ್ರಕರಣ ನೋಂದಾಯಿಸಲಾಗಿದೆ. ಎರಡನೆಯದನ್ನು ವಯಸ್ಕರ ದೂರುಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.



ಮೇ 28ರಂದು ಜಂತರ್ ಮಂತರ್ ಬಳಿಯ ತಮ್ಮ ಪ್ರತಿಭಟನಾ ಸ್ಥಳದಿಂದ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ತಡೆದು ಬಂಧಿಸಿದರು. ವಿಶ್ವ ಚಾಂಪಿಯನ್‌ಶಿಪ್‌ಗಳ ಕಂಚಿನ ವಿಜೇತ ವಿನೇಶ ಫೋಗಟ್ ಮತ್ತು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಜೊತೆಗೆ ಸಾಕ್ಷಿ  ಮಲಿಕ್ ಅವರನ್ನು ಬಂಧಿಸಿ ನಂತರ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಗಾಗಿ ಕುಸ್ತಿಪಟುಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ