LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಪಾಯದಲ್ಲಿರುವ ಕನ್ನಡಿಗರ ರಕ್ಷಣೆಗೆ ಹೋಗಲು ಸರಕಾರಕ್ಕೆ ಸಿದ್ದರಾಮಯ್ಯ ಕರೆ

ಬೆಂಗಳೂರು: ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಅಲ್ಲಿನ ಕನ್ನಡಿಗರು ಹೆದರಿಕೆಯಿಂದ ಜೀವ ಕೈಯಲ್ಲಿ ಹಿಡಿದು ಜೀವಿಸುತ್ತಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೂಡಲೇ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆಯವರನ್ನು ಸಂಪರ್ಕಿಸಿ ಅಲ್ಲಿನ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದ್ದಾರೆ.



ಟ್ವೀಟ್ ಮಾಡುವ ಮೂಲಕ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದರು.



ವಿವಾದಗಳನ್ನು, ಸಮಸ್ಯೆಗಳನ್ನು ಬೆಳೆಯಲು ಬಿಟ್ಟು ಅವುಗಳನ್ನು ರಾಜಕೀಯಕ್ಕೆ ಬಳಸುವುದು ಬಿಜೆಪಿ ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ಬಿಜೆಪಿ ಸರ್ಕಾರ ಆನಂದಿಸುತ್ತಿದೆ ಎಂದು ಮಾಜಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.



ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡೂ ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ