LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮುಚ್ಚಿರುವ ಇಂದಿರಾ ಕ್ಯಾಂಟೀನ ಮುಂದೆ ಧರಣಿ : ಸಿದ್ದರಾಮಯ್ಯ 

ಬೆಂಗಳೂರು: ರಾಜ್ಯದ ಕೆಲವೆಡೆ ಇಂದಿರಾ ಕ್ಯಾಂಟೀನ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.



ಸರಣಿ ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆದು ಗುಣಮಟ್ಟದ ತಿಂಡಿ-ಊಟ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಇದಕ್ಕೆ ತಪ್ಪಿದ್ದಲ್ಲಿ ತಾವೇ ಬಂದು ಮುಚ್ಚಿರುವ ಇಂದಿರಾ ಕ್ಯಾಂಟೀನ್​ಗಳ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.



ಇಂದಿರಾ ಕ್ಯಾಂಟೀನ್​ಗಳಿಗೆ ಬರುತ್ತಿರುವ ಜನರ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವುದು ಒಂದು ನೆಪ ಮಾತ್ರ. ರಾಜ್ಯ ಬಿಜೆಪಿ ಸರ್ಕಾರ ದುರುದ್ದೇಶದಿಂದ ಕ್ಯಾಂಟೀನ್ ತಿಂಡಿ-ಊಟದ ಗುಣಮಟ್ಟವನ್ನು ಕೆಡಿಸುತ್ತಿದೆ. ಇದರ ಜೊತೆಗೆ ಕ್ಯಾಂಟೀನ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದೇ ಸತಾಯಿಸುತ್ತಿದೆ. ಎಲ್ಲ ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿನ ಕ್ಯಾಂಟೀನ್​ಗಳನ್ನು ಕೂಡಾ ಒಂದೊಂದಾಗಿ ಮುಚ್ಚಲಾಗುತ್ತಿದೆ. ಕ್ಯಾಂಟೀನ್ ಗುತ್ತಿಗೆಯ ನವೀಕರಣಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ. ಕಳೆದ ಆರು ತಿಂಗಳುಗಳಿಂದ ಬಿಬಿಎಂಪಿಗೆ ಕ್ಯಾಂಟೀನ್ ವೆಚ್ಚದ ಸಹಾಯಧನವನ್ನೂ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಗುತ್ತಿಗೆದಾರರು ಯಾವುದೇ ಕ್ಷಣದಲ್ಲಿ ಉಳಿದ ಕ್ಯಾಂಟೀನ್​ಗಳಿಗೆ ಆಹಾರ ಪೂರೈಕೆ ನಿಲ್ಲಿಸಬಹುದು.



ನಾವು ಇಂದಿರಾ ಕ್ಯಾಂಟೀನ್​ಗಾಗಿ 2017-18ರಲ್ಲಿ ರೂ. 100 ಕೋಟಿ ಮತ್ತು 2018-19ರಲ್ಲಿ ರೂ.145 ಕೋಟಿಗಳನ್ನು ಬಜೆಟ್​ನಲ್ಲಿ ನೀಡಿದ್ದೆವು. 2022-23ರ ಬಿಜೆಪಿ ಸರ್ಕಾರ ಬಜೆಟ್​ನಲ್ಲಿ ಹಣ ನೀಡದೆ ಖರ್ಚಿನ ಭಾರವನ್ನು ಬಿಬಿಎಂಪಿ ತಲೆ ಮೇಲೆ ಹೊರಿಸಿರುವುದೇ ಈಗಿನ ಹಣದ ಕೊರತೆಗೆ ಕಾರಣ..



ಬೆಲೆ ಏರಿಕೆಯಿಂದಾಗಿ ಬೆಂಗಳೂರು ಮಹಾನಗರದಲ್ಲಿ ಒಂದು ಊಟಕ್ಕೆ ಇಂದು 50-60 ರೂಪಾಯಿ ನೀಡಬೇಕಾಗಿದೆ. ನಗರದ ಬಡವರು ಮತ್ತು ಬೇರೆ ಊರುಗಳಿಂದ ಬಂದವರಿಗೆ ಅಕ್ಷಯಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಮುಚ್ಚಿ ಅವರ ಶಾಪಕ್ಕೆ ಯಾಕೆ ತುತ್ತಾಗುತ್ತೀರಿ ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ