LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ಸಿದ್ದರಾಮಯ್ಯ ಕುಟುಕು ಕಾರ್ಯಾಚರಣೆ : ದೆಹಲಿಯ ರಿತೇಶ ಪಾಂಡೆ ಬಂಧನ

ಬೆಂಗಳೂರು, ಅ. 24 (ಸಮದರ್ಶಿ ಸುದ್ದಿ): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಕುಟುಕು ಕಾರ್ಯಾಚರಣೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ದೆಹಲಿ ಮೂಲದ ರಿತೇಶ ಪಾಂಡೆ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ವಿವಾದಾತ್ಮಕ ವಿಡಿಯೊ ಚಿತ್ರೀಕರಣಕ್ಕಾಗಿ ಮೊಬೈಲ್ ಖರೀದಿಸಿರುವ ಆರೋಪ ರಿತೇಶ ಪಾಂಡೆ ಮೇಲಿದ್ದು, ದೆಹಲಿಯಲ್ಲಿ ಬಂಧಿಸಿದ ಬಳಿಕ ಬೆಂಗಳೂರಿಗೆ ಕರೆತರಲಾಗಿದೆ. ಸಿಸಿಬಿ ಸೈಬರ್ ಅಪರಾಧ ವಿಭಾಗದ ಅಧಿಕಾರಿಗಳು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ನೋಟಿಸ್ ನೀಡಿದ ಬಳಿಕ ಅವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ, ಈ ಕುಟುಕು ಕಾರ್ಯಾಚರಣೆಯ ಹಿಂದೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಹಾಗೂ ಕನ್ನಡ ಸುದ್ದಿವಾಹಿನಿಯೊಂದರೊಂದಿಗೆ ಗುರುತಿಸಿಕೊಂಡಿರುವ ರಾಕೇಶ ಶೆಟ್ಟಿ ಅವರ ಕೈವಾಡವಿದೆ ಎಂದು ಆರೋಪಿಸಿದ್ದರು.

ಪ್ರಕರಣದಲ್ಲಿ ಮೊದಲ ಬಂಧನವಾಗಿರುವ ಹಿನ್ನೆಲೆಯಲ್ಲಿ ವಿಡಿಯೊ ಚಿತ್ರೀಕರಣ ಹಾಗೂ ಪ್ರಸಾರದ ಹಿಂದಿನ ವ್ಯಕ್ತಿಗಳ ಪಾತ್ರ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಿನಿ ರಜನೀಶ ಸೇರಿ 6 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಕ್ರಮಕ್ಕೆ ಆಗ್ರಹಅಶಾಂತಿಗೆ ಇಸ್ರೇಲ್ ಆಕ್ರಮಣವೇ ಕಾರಣ: 4 ರಾಷ್ಟ್ರಗಳ ಜಂಟಿ ಹೇಳಿಕೆವಿದ್ಯಾರ್ಥಿಗಳ ಹೋರಾಟಕ್ಕೆ ನಾಸಿರುದ್ದೀನ್ ಶಾ, ಪಾಯಲ್ ಕಪಾಡಿಯಾ ಬೆಂಬಲಕಾನೂನಿನ ಭಯವೇ ಇಲ್ಲವೇ?: ಉದ್ರಿ ನೀಡಲು ನಿರಾಕರಿಸಿದ್ದಕ್ಕೆ ಹೋಟೆಲ್ ಮಾಲಕನ ಹತ್ಯೆಗೋಲ್ಡನ್ ಚಾರಿಯಟ್ ರೈಲಿಗೆ ಮರುಚಾಲನೆ: ಟಿಕೆಟ್ ದರ 3.5 ಲಕ್ಷದಿಂದ 4.4 ಲಕ್ಷ ರೂ.ಪೆಲೆಟ್ ಗನ್ ಬಳಕೆ, ಮಹಿಳೆಯರಿಗೆ ಕಿರುಕುಳ : ಸುಪ್ರೀಂ ಕೋರ್ಟ ಸಮಿತಿಯಿಂದ ವಿಚಾರಣೆಸಿದ್ದರಾಮಯ್ಯ ಕುಟುಕು ಕಾರ್ಯಾಚರಣೆ : ದೆಹಲಿಯ ರಿತೇಶ ಪಾಂಡೆ ಬಂಧನಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸಿಲುಕಿ ಯುವಕನ ಮುಖಕ್ಕೆ ಗಂಭೀರ ಗಾಯಚಿರತೆ ಸೆರೆ ವೇಳೆ ಅರಣ್ಯ ಇಲಾಖೆ ವೈದ್ಯರ ಮೇಲೆ ಹಲ್ಲೆ: 15 ಮಂದಿ ವಿರುದ್ಧ ಪ್ರಕರಣಸರ್ಕಾರವನ್ನು ಪ್ರಶ್ನಿಸಿದರೆ ಶಾಂತಿ ಭಂಗವೇ?: ಬಾಂಡ್‌ಗೆ ಸಹಿ ಹಾಕಲು ನೇಹಾ ಬೋರಾ ನಿರಾಕರಣೆ