LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಬೆಂಗಳೂರು, ನ. 2: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಕೃಪಾ ಆಳ್ವಾ, ವಿನೋದ ಕುಮಾರ ಹಾಗೂ ಪ್ರಶಾಂತ ಕುಮಾರ ಅವರಿಗೆ ಬೆಂಗಳೂರಿನ 66ನೇ ಸಿಸಿಎಚ್ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸಿದ್ದರಾಮಯ್ಯ ನೀಡಿದ ದೂರಿನ ಆಧಾರದಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನ್ಯಾಯಾಲಯದ ಮೊರೆ ಹೋಗಿದ್ದರು. ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಕೆಲವು ಷರತ್ತುಗಳನ್ನು ವಿಧಿಸಿ ಮಧ್ಯಂತರ ಜಾಮೀನು ನೀಡಿದೆ.

ಆರೋಪಿಗಳು ತಲಾ ₹1 ಲಕ್ಷ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಬಾರದು ಹಾಗೂ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಜಾಮೀನು ಅರ್ಜಿಗಳು ವಜಾಗೊಂಡಲ್ಲಿ ತಕ್ಷಣ ತನಿಖಾಧಿಕಾರಿಯ ಮುಂದೆ ಶರಣಾಗಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಇದೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ರಾಕೇಶ ಶೆಟ್ಟಿ, ಚಂದನ, ಮೋಹನ ಗೌಡ ಹಾಗೂ ಪ್ರಜ್ವಲ ಪ್ರಸಾದ ಅವರ ಅರ್ಜಿಗಳ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಲಾಗಿದೆ.

ಸರ್ಕಾರದ ಪರ ಹಾಜರಾದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ ಅವರು ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಮುಂದಿನ ವಿಚಾರಣೆಗೆ ನವೆಂಬರ್ 4ನ್ನು ನಿಗದಿಪಡಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಅಕ್ರಮ ಮದ್ಯ ಮಾರಾಟ: ₹44,175 ಮೌಲ್ಯದ ಮದ್ಯ, ಬಿಯರ್ ಬಾಟಲಿ ವಶಬೆಳಗಾವಿಯಲ್ಲಿ ಅಕ್ರಮ ಮದ್ಯ ಮಾರಾಟ: ₹44,175 ಮೌಲ್ಯದ ಮದ್ಯ, ಬಿಯರ್ ಬಾಟಲಿ ವಶರಸ್ತೆ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶ: 8 ಕಾರ್ಮಿಕರ ದುರ್ಮರಣಜಾತಿ ಬಲದಿಂದಲೇ ಕುಮಾರಸ್ವಾಮಿ ಸಿಎಂ ಆಗಿದ್ದು: ಪ್ರಿಯಾಂಕ್ ಖರ್ಗೆ ವಾಗ್ದಾಳಿಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನುಎಪಿಎಂಸಿಗಳಲ್ಲಿ ಕಮಿಷನ್ ಹಾವಳಿ ತಡೆಗೆ ಆಗ್ರಹಿಸಿ ರೈತರ ಅನಿರ್ದಿಷ್ಟಾವಧಿ ಧರಣಿಸಕ್ಕರೆ ಮಾರಾಟ ದರ ಆಧರಿಸಿ ಕಬ್ಬಿನ ಬೆಲೆ ನಿಗದಿ ಅಸಾಧ್ಯ: ಸತೀಶ ಜಾರಕಿಹೊಳಿನನ್ನ ವಿರುದ್ಧ ಕೇಂದ್ರ ಸಚಿವರಿಂದ ರಾಜಕೀಯ ಸಂಚು: ಪ್ರಿಯಾಂಕ್ ಖರ್ಗೆಆಯೋಗದ ಪರ ಬಿಜೆಪಿ ಬ್ಯಾಟಿಂಗ್; ಹೆಸರು ತೆಗೆದುಹಾಕುವುದು ಕಳ್ಳತನವಲ್ಲಎಸ್‌ಐಆರ್ ಪಟ್ಟಿ ತಿರಸ್ಕರಿಸಲು ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ