LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್

ಬೆಂಗಳೂರು, ಸೆ 10 : (ಸಮದರ್ಶಿ ಸುದ್ದಿ) - ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ದಾಖಲೆಗಳಲ್ಲಿನ ವ್ಯತ್ಯಾಸ ಹಾಗೂ ಹಿಂದಿನ ಮತದಾರರ ಪಟ್ಟಿಯೊಂದಿಗೆ ಮಾಹಿತಿ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ತಾಯಿ ಗೌರಮ್ಮ ಸೇರಿದಂತೆ ಹಲವು ಗಣ್ಯರಿಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರದ ಮತದಾರರಾಗಿರುವ ಗೌರಮ್ಮ ಅವರ ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ನೋಟಿಸ್ ನೀಡಲಾಗಿದೆ. ಇದೇ ಪಟ್ಟಿಯಲ್ಲಿ ಝೆರೋಧಾ ಸಂಸ್ಥೆಯ ನಿತಿನ್ ಕಾಮತ್, ನಿಖಿಲ್ ಕಾಮತ್ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಅವರ ಕುಟುಂಬದ ಸದಸ್ಯರ ಹೆಸರುಗಳೂ ಸೇರಿವೆ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕಾಮತ್ ಮತ್ತು ನಿತಿನ್ ಕಾಮತ್ ಅವರ ದಾಖಲೆಗಳಲ್ಲಿ ಪೋಷಕರ ಹೆಸರಿಗೆ ಸಂಬಂಧಿಸಿದ ವ್ಯತ್ಯಾಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ತಾಯಿ ರೇವತಿ ಕಾಮತ್ ಅವರಿಗೂ ನೋಟಿಸ್ ಜಾರಿಗೊಳಿಸಲಾಗಿದೆ.

ಇದೇ ರೀತಿ ನಂದನ್ ನಿಲೇಕಣಿ ಅವರ ಪತ್ನಿ ರೋಹಿಣಿ ನಿಲೇಕಣಿ, ಮಗಳು ಜಾಹ್ನವಿ ನಂದನ್ ನಿಲೇಕಣಿ ಹಾಗೂ ಮಗ ನಿಹಾರ್ ನಿಲೇಕಣಿ ಅವರ ಹೆಸರುಗಳು 2002ರ ಮತದಾರರ ಪಟ್ಟಿಯೊಂದಿಗೆ ಹೊಂದಾಣಿಕೆಯಾಗಿಲ್ಲ. ಹೀಗಾಗಿ ಅವರಿಗೂ ನೋಟಿಸ್ ನೀಡಲಾಗಿದೆ.

ಮನೆಗೇ ತೆರಳಿ ಪರಿಶೀಲನೆ

ನೋಟಿಸ್ ಪಡೆದ ಗಣ್ಯರು ಹಾಗೂ ವಿಐಪಿಗಳಿಗೆ ಅನಾನುಕೂಲವಾಗದಂತೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಖುದ್ದಾಗಿ ಅವರ ಮನೆಗಳಿಗೆ ತೆರಳಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ.

ವಿಚಾರಣಾ ಕೇಂದ್ರಗಳಿಗೆ ತೆರಳಲು ಸಾಧ್ಯವಾಗದ ಹಿರಿಯ ನಾಗರಿಕರು ಹಾಗೂ ಅಂಗವಿಕಲ ಮತದಾರರಿಗೂ ಇದೇ ರೀತಿಯ ನೆರವು ನೀಡಲಾಗುವುದು. ಸಾರ್ವಜನಿಕರಿಗೆ ಅಗತ್ಯ ಸಹಾಯ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ನಮೂನೆ 6, ತಿದ್ದುಪಡಿಗಾಗಿ ನಮೂನೆ 8, ವಿದೇಶಿ ಮತದಾರರಿಗೆ ನಮೂನೆ 6ಎ ಹಾಗೂ ಹೆಸರು ತೆಗೆದುಹಾಕಲು ನಮೂನೆ 7ರ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಮತ್ತು ಆಕ್ಷೇಪಣೆ ಸಲ್ಲಿಸಲು ಮತದಾರರಿಗೆ ಅನುಕೂಲವಾಗುವಂತೆ ಸೆಪ್ಟೆಂಬರ್ 19 ಮತ್ತು 20ರಂದು ವಿಶೇಷ ಅಭಿಯಾನ ಆಯೋಜಿಸಲಾಗುವುದು. ಈ ಸಂದರ್ಭದಲ್ಲಿ ಅಗತ್ಯ ಮಾರ್ಗದರ್ಶನ ಹಾಗೂ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಹೇಶ್ವರ ರಾವ್ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ