LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಸಂಸತ್ ಮೇಲೆ ಹೊಗೆ ದಾಳಿ; ಬಾಗಲಕೋಟ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರನ ವಿಚಾರಣೆ

ಬಾಗಲಕೋಟ, 20: : ದೆಹಲಿಯ ವಿಶೇಷ ರಾಷ್ಟ್ರೀಯ ತನಿಖಾ ದಳದ ನಾಲ್ವರು ಹಿರಿಯ ಅಧಿಕಾರಿಗಳ ತಂಡ ಬುಧವಾರ ಸಂಜೆ ಬಾಗಲಕೋಟ ನಗರಕ್ಕೆ ಆಗಮಿಸಿ ಇಲ್ಲಿನ ವಿದ್ಯಾಗಿರಿಯಲ್ಲಿ ವಾಸವಿರುವ ನಿವೃತ್ತ ಡಿವೈಎಸ್ಪಿ ಪುತ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.



ದೆಹಲಿಯ ಸಂಸತ್ ಭವನದೊಳಗೆ ಹೊಗೆ ಬಾಂಬ್ ಸ್ಪೋಟದ ಪ್ರಮುಖ ಆರೋಪಿ, ಮೈಸೂರಿನ ಮನೋರಂಜನ್ ಜತೆಗೆ 2008-09ರಲ್ಲಿ ಬೆಂಗಳೂರಿನ ಬಿಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗದ ವೇಳೆ ಒಂದೇ ಕೊಠಡಿಯಲ್ಲಿ ಇಬ್ಬರೂ ವಾಸವಾಗಿದ್ದರು. ಹೀಗಾಗಿ ಇಬ್ಬರಿಗೂ ಬಹು ದಿನಗಳಿಂದ ಸ್ನೆಃಹವಿತ್ತು.ನಿರಂತರ ಸಂಪರ್ಕದಲ್ಲಿದ್ದ ಸ್ನೇಹಿತ ಬಾಗಲಕೋಟದ ಸಾಯಿಕೃಷ್ಣ ಜಗಲಿ ಎಂಬ ಯುವಕನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಮತ್ತು ಸಾಯಿಕೃಷ್ಣ ಅವರು ಎಷ್ಟು ವರ್ಷಗಳಿಂದ ಸ್ನೇಹಿತರು, ಸಂಸತ್ ಭವನದ ದಾಳಿಯ ವಿಷಯ, ಸಾಯಿಕೃಷ್ಣನಿಗೆ ಗೊತ್ತಿತ್ತಾ ? ಎಂಬ ವಿಷಯಗಳ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.



ಸುಮಾರು ಎರಡು ಗಂಟೆಗಳ ಕಾಲ ಬಾಗಲಕೋಟ ನವನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾಚರಣೆ ನಡೆಸಿ, ತಡರಾತ್ರಿ ಸಾಯಿಕೃಷ್ಣ ಜಗಲಿಯನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ. ಸಾಯಿಕೃಷ್ಣ ಕ್ರಾಂತಿಕಾರಿ ವಿಚಾರ ಹೊಂದಿದ್ದರು ಮತ್ತು ಮನೋರಂಜನ ಜತೆಗೆ ನಿರಂತರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.



ದೆಹಲಿಯ ಪೊಲೀಸರು ಬಾಗಲಕೋಟಗೆ ಬಂದು ಸಂಸತ್ ಭವನದೊಳಗೆ ನುಗ್ಗಿದ ಮೈಸೂರಿನ ಮನೋರಂಜನ ಅವರೊಂದಿಗೆ ಎಂಜಿನಿಯರಿಂಗ್ ಬ್ಯಾಚ್‌ಮೇಟ್ ಆಗಿದ್ದ ಬಾಗಲಕೋಟದ ಸಾಯಿಕೃಷ್ಣ ಜಗಲಿ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ