LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡಗೆ ಜಾಮೀನು

ಹೊಸದಿಲ್ಲಿ: 2002ರ ಗುಜರಾತ್‌ ನರಸಂಹಾರದ ಬಳಿಕ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಸಾಮಾಜಿಕ ಕಾರ್ಯಕರ್ತೆ, ಕೋಮು ಗಲಭೆ ಸಂತ್ರಸ್ತರ ಪರ ದಶಕಗಳಿಂದ ಹೋರಾಟ ನಡೆಸುತ್ತ ಬಂದಿರುವ ತೀಸ್ತಾ ಸೆತಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.



ತೀಸ್ತಾ ಅವರು ಜೂನ್‌ನಿಂದಲೂ ಜೈಲಿನಲ್ಲಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರಿಗೆ ಈಗಾಗಲೇ ಸಾಕಷ್ಟು ಸಮಯ ಸಿಕ್ಕಿದೆ ಎಂದು ಕೋರ್ಟ್ ಗುಜರಾತ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ತೀಸ್ತಾ ಅವರನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ಘಟಕವು ಜೂನ್ 25ರಂದು ಬಂಧಿಸಿತ್ತು.



ಅವರ ಜಾಮೀನು ಅರ್ಜಿಯ ಅಂತಿಮ ನಿರ್ಧಾರವನ್ನು ಗುಜರಾತ್ ಹೈಕೋರ್ಟ್ ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಹೇಳಿದೆ. ಆದರೆ ಅದರೊಳಗೆ ತೀಸ್ತಾ ಅವರಿಗೆ ಜೈಲಿನಿಂದ ಬಿಡುಗಡೆ ಸಿಗಲಿದೆ. ಯಾವುದೇ ಸ್ಥಳೀಯ ಶ್ಯೂರಿಟಿಗಳಿಲ್ಲದೆ ತೀಸ್ತಾ ಅವರನ್ನು ಶನಿವಾರ ಬಿಡುಗಡೆ ಮಾಡುವಂತೆ ಸೂಚಿಸಿದೆ.



ಮುಖ್ಯ ನ್ಯಾಯಮೂರ್ತಿ ಉದಯ ಲಲಿತ ಮತ್ತು ನ್ಯಾ. ಎಸ್ ರವೀಂದ್ರ ಭಟ್ ಹಾಗೂ ನ್ಯಾ. ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠ ಈ ಆದೇಶ ನೀಡಿದೆ.



ತಮ್ಮ ಪಾಸ‌ಪೋರ್ಟ ಒಪ್ಪಿಸುವಂತೆ ಮತ್ತು ತನಿಖೆಗೆ ಸಹಕಾರ ನೀಡುವಂತೆ ತೀಸ್ತಾ ಅವರಿಗೆ ಕೋರ್ಟ್ ನಿರ್ದೇಶನ ನೀಡಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ