LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ಎಸ್ಐಆರ್ ರದ್ದತಿಗೆ ಆಗ್ರಹಿಸಿ ದಲಿತ, ರೈತ, ಕಾರ್ಮಿಕ ಸಂಘಟನೆಗಳ ಒಗ್ಗಟ್ಟಿನ ಪ್ರತಿಭಟನೆ

ಬೆಂಗಳೂರು, ಅ. 23 (ಸಮದರ್ಶಿ ಸುದ್ದಿ): ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ರಾಜೀನಾಮೆಗೆ ಒತ್ತಾಯಿಸಿ ಶುಕ್ರವಾರ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದವು. ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಹಾಗೂ ಅಲ್ಪಸಂಖ್ಯಾತ ಸಂಘಟನೆಗಳ ಕಾರ್ಯಕರ್ತರು ರಾಷ್ಟ್ರಧ್ವಜಗಳೊಂದಿಗೆ ಮೆರವಣಿಗೆ ನಡೆಸಿ ಚುನಾವಣಾ ಆಯೋಗದ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದರು.

ನಗರದ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ನಡೆದ ಜಾಥಾದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಎಸ್ಐಆರ್ ಪ್ರಕ್ರಿಯೆ ರದ್ದುಗೊಳಿಸಿ ಚುನಾವಣಾ ಆಯೋಗವನ್ನು ನಿಷ್ಪಕ್ಷಪಾತವಾಗಿ ಮರುರಚಿಸಬೇಕು ಎಂದು ಆಗ್ರಹಿಸಿದರು.

ದಿಲ್ಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿದ ಸಂಘಟನೆಗಳು, ಜನರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದವು. ಪ್ರಜಾಪ್ರಭುತ್ವದಲ್ಲಿ ಭಿನ್ನಮತ ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ರಕ್ಷಿಸಬೇಕು ಎಂಬ ಒತ್ತಾಯದೊಂದಿಗೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳನ್ನು ಆಯೋಜಿಸಲಾಗಿತ್ತು.

ಇದೇ ಸಂದರ್ಭದಲ್ಲಿ ‘ನನ್ನ ಮತ ನನ್ನ ಹಕ್ಕು’ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ ಇನ್‌ಫ್ಯಾಂಟ್ರಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯ ಯುದ್ಧ ಸ್ಮಾರಕದ ಬಳಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು. ಮತದಾನದ ಹಕ್ಕಿನ ರಕ್ಷಣೆಗಾಗಿ ಘೋಷಣೆಗಳನ್ನು ಕೂಗಿ ಎಸ್ಐಆರ್ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರನ್ನು ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂಬುದು ಸಂಘಟನೆಗಳ ಆರೋಪವಾಗಿದೆ. ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ಯಾವುದೇ ಅರ್ಹ ಮತದಾರರ ಹೆಸರು ಕೈಬಿಡಬಾರದು ಹಾಗೂ ಚುನಾವಣಾ ಆಯೋಗದ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಎಸ್ಐಆರ್ ವಿರೋಧಿ ಹೋರಾಟಕ್ಕೆ ಕರ್ನಾಟಕದ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಮತದಾನದ ಹಕ್ಕು ಹಾಗೂ ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಮತದಾನ; ಅ.27ರಂದು ಮತ ಎಣಿಕೆಕರ್ನಾಟಕದಲ್ಲಿ 43.82 ಲಕ್ಷ ಎಸ್‌ಐಆರ್ ನೋಟಿಸ್‌ಗಳ ವಿಚಾರಣೆ ಪೂರ್ಣ; ಅ.27ಕ್ಕೆ ಅಂತಿಮ ಮತದಾರರ ಪಟ್ಟಿಸ್ಟಿಂಗ್ ಕಾರ್ಯಾಚರಣೆ : ಪವರ್ ಟಿವಿ ಮುಖ್ಯಸ್ಥ ಶೆಟ್ಟಿಗೆ ನಿರೀಕ್ಷಣಾ ಜಾಮೀನುಎಂಎಲ್‌ಸಿ ಚುನಾವಣೆಯಲ್ಲಿ ಅಕ್ರಮ : ಸಮಾಜವಾದಿ ಪಕ್ಷಭಿನ್ನಾಭಿಪ್ರಾಯ ಅಪರಾಧವಲ್ಲ : ಹೈಕೋರ್ಟಎಸ್ಐಆರ್ ರದ್ದತಿಗೆ ಆಗ್ರಹಿಸಿ ದಲಿತ, ರೈತ, ಕಾರ್ಮಿಕ ಸಂಘಟನೆಗಳ ಒಗ್ಗಟ್ಟಿನ ಪ್ರತಿಭಟನೆಎಸ್ಐಆರ್ ಸ್ಥಗಿತಕ್ಕೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆಮಸೀದಿ ಧ್ವಂಸಕ್ಕೆ ಆಕ್ಷೇಪ: ಕಚ್ ಜಿಲ್ಲಾಧಿಕಾರಿಗೆ ಹೈಕೋರ್ಟ ಸಮನ್ಸಸ್ಟಿಂಗ್ ಕಾರ್ಯಾಚರಣೆ ಹಿಂದೆ ಕೃಪಾ ಆಳ್ವಾ, ರಾಕೇಶ ಶೆಟ್ಟಿ: ಸಿದ್ದರಾಮಯ್ಯಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಕಾರ್ಯಾಚರಣೆಯಲ್ಲಿ ಕಾಂಗ್ರೆಸ್‌ನವರ ಕೈವಾಡ: ಯತೀಂದ್ರ ಆರೋಪ