LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶೀಘ್ರದಲ್ಲೇ ರಮೇಶ ಜಾರಕಿಹೊಳಿ ಅವರಿಗೆ ದೊಡ್ಡ ಜವಾಬ್ದಾರಿ

ಬೆಳಗಾವಿ: ರಮೇಶ ಜಾರಕಿಹೊಳಿಯವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಲಾಗಿದ್ದು ರಮೇಶ ಜಾರಕಿಹೊಳಿ ಅವರು ನಮ್ಮ ಸ್ನೇಹಿತರಿದ್ದಾರೆ. ಶೀಘ್ರವೇ ರಮೇಶ ಜಾರಕಿಹೊಳಿ ಅವರಿಗೆ ದೊಡ್ಡ ಜವಾಬ್ದಾರಿ ನೀಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ ಹೇಳಿದರು.



ಬೆಳಗಾವಿಯ ಸರ್ಕ್ಯುಟ್ ಹೌಸನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು, ಕಾಂಗ್ರೆಸ್ ಸೋಲಿಸಲು ರಮೇಶ ಜಾರಕಿಹೊಳಿ ಪ್ರಮುಖ ಪಾತ್ರ ವಹಿಸುವರು ಎಂದರು.



ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದಾರೆ. ಈಗಾಗಲೇ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಬಿಜೆಪಿ ಮುಂದಿನ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ರಮೇಶ ಜಾರಕಿಹೊಳಿಯವರಿಗೆ ಶೀಘ್ರದಲ್ಲೇ ಪಕ್ಷ ದೊಡ್ಡ ಜವಾಬ್ದಾರಿ ನೀಡಲಿದೆ. ಮುಂದಿನ ಚುನಾವಣೆ ಗೆಲ್ಲುವಲ್ಲಿ ರಮೇಶ ಜಾರಕಿಹೊಳಿ ಪಾತ್ರ ಮುಖ್ಯವಾಗಲಿದೆ ಎಂದರು.



ಬಿಜೆಪಿ ನಾಯಕರ ವಿರುದ್ಧವೇ ಯತ್ನಾಳ ವಾಗ್ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅರುಣ ಸಿಂಗ್, ಯತ್ನಾಳ ಅವರನ್ನು ಮಂತ್ರಿ ಮಾಡಿಲ್ಲ ಎಂದು ಹೀಗೆ ಮಾತಾಡುತ್ತಿದ್ದಾರೆ. ಯಾರೇ ಆದರೂ ಪಕ್ಷದ ಚೌಕಟ್ಟಿನಲ್ಲಿಯೇ ಮಾತನಾಡಬೇಕು. ಇಂಥ ಹೇಳಿಕೆ ನೀಡಿದ ಬಗ್ಗೆ ನೋಟಿಸ್ ಜಾರಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ