LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಸಂಪಾದಕರ ಸಭೆಯಲ್ಲಿ ರಾಜ್ಯ ಪದಾಧಿಕಾರಿಗಳಿಗೆ ಸನ್ಮಾನ

ಬೆಳಗಾವಿ, ೨೨:  ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಅಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ, ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಚೆನ್ನಬಸವ ಅವರುಗಳನ್ನು ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಸತ್ಕರಿಸಲಾಯಿತು.



ಬೆಳಗಾವಿಯ ಸನ್ಮಾನ ಡಿಲಕ್ಸ ಹೋಟೆಲಿನಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಎ.ಸಿ. ತಿಪ್ಪೇಸ್ವಾಮಿ ಅವರು, ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಮಸ್ಯೆಗಳ ಪರಿಹಾರಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು.



ಉಪಾಧ್ಯಕ್ಷರಾದ ಮಂಜುನಾಥ ಅಬ್ಬಿಗೇರಿ ಮಾತನಾಡಿ, ಜಾಹೀರಾತು ನೀತಿ ಸೇರಿದಂತೆ ಇತರ ವಿಷಯಗಳ ಕುರಿತು ಮುಂದಿನ ದಿನಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ವಿವರಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಬಸವ ಬಾಗಲವಾಡ ಅವರು ಮಾತನಾಡಿ, ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಉಳಿವು ಮತ್ತು ಬೆಳವಣಿಗೆಗಾಗಿ ಒಗ್ಗಟ್ಟಿನಿಂದ ಪ್ರಯತ್ನಿಸಬೇಕಿದೆ ಎಂದರು.



ಹಿರಿಯ ಸಂಪಾದಕ ಎಸ್.ಬಿ.ಧಾರವಾಡಕರ ಅವರು ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು. ಸಂಪಾದಕರ ಸಂಘದ ಜಿಲ್ಲಾ ಅಧ್ಯಕ್ಷ ಮುರುಗೇಶ ಶಿವಪೂಜಿ  ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿ, ಕಳೆದ 35 ವರ್ಷಗಳಲ್ಲಿ ಬೆಳಗಾವಿ ಸಂಪಾದಕರ ಸಂಘ ನಡೆದು ಬಂದ ದಾರಿಯನ್ನು ವಿವರಿಸಿದರು. ಪ್ರಧಾನ ಕಾರ್ಯದರ್ಶಿ ಸಂಪತಕುಮಾರ ಮುಚಳಂಬಿ ಅವರು ವಂದಿಸಿದರು.



ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಬೆಂಗಳೂರು ಸಂಘಕ್ಕೆ ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘವು ತನ್ನ ಸ್ವತಂತ್ರ ಅಸ್ತಿತ್ವವನ್ನು ಉಳಿಸಿಕೊಂಡು ಅಫಿಲಿಯೇಶನ್ (ಸಂಲಗ್ನತೆ ಅಥವಾ ಸಂಯೋಜನೆ) ಹೊಂದುವ ಕುರಿತು ಇದೇ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಯಿತು. ಅದಕ್ಕೆ ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಅಧ್ಯಕ್ಷರು, ರಾಜ್ಯ ಉಪಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.



ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯಿಂದ ರಾಜ್ಯ ಪರಿಷತ್ತಿಗೆ ಸಂಪಾದಕರುಗಳಾದ ಎ.ಬಿ.ಧಾರವಾಡಕರ, ಮನೋಹರ ಕಾಲಕುಂದ್ರಿಕರ ಮತ್ತು ಎನ್ . ಪ್ರಶಾಂತ ರಾವ್ ಅವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.



ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರುಗಳಾದ ಹಿರೋಜಿ ಮಾವರ್ಕರ, ಶ್ರೀಮತಿ ಬಬಿತಾ ಪವಾರ , ಮಲ್ಲಿಕಾರ್ಜುನ ಹೆಗನಾಯಕ ಮತ್ತು ಗುರುರಾಜ ಕದಮ್ ಅಲ್ಲದೇ ದಿನಪತ್ರಿಕೆಗಳ ಸಂಪಾದಕರುಗಳಾದ ಶಿವರಾಯ ಏಳುಕೋಟಿ, ವಿಜಯಕುಮಾರ ಮುಚ್ಚಳಂಬಿ, ನಾನಪ್ಪ ಮಾವರ್ಕರ, ಜಯಪ್ರಕಾಶ ಜೋಶಿ, ಮತೀನ ಧಾರವಾಡಕರ, ರಾಜೇಂದ್ರ ಪವಾರ ಮತ್ತು ಚೆನ್ನಪ್ಪ ವಗ್ಗಣ್ಣವರ ಉಪಸ್ಥಿತರಿದ್ದು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ