LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಬಹಿರಂಗ

ಬೆಂಗಳೂರು, ಅ. 29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋದಲ್ಲಿ ಉಲ್ಲೇಖಿಸಲಾದ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವಿಡಿಯೋದಲ್ಲಿ ಬಿಂಬಿಸಲಾದ ಆರೋಪಗಳು ಕಟ್ಟುಕಥೆಯಿಂದ ಕೂಡಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ನಿರೂಪಣೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದ ಕುರಿತು ಸಿಸಿಬಿ ಸಮಗ್ರ ತನಿಖೆ ನಡೆಸಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಎಲ್ಲ ವ್ಯಕ್ತಿಗಳನ್ನು ಗುರುತಿಸಿ ವಿಚಾರಣೆ ನಡೆಸಿದೆ. ಕೆಲವರನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಚಾರಣೆಗೆ ಒಳಪಡಿಸಲಾಗಿದೆ.

ವಿಚಾರಣೆ ವೇಳೆ ದಾಖಲಿಸಲಾದ ಹೇಳಿಕೆಗಳು ಹಾಗೂ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳಲ್ಲಿ ವಿಡಿಯೋದಲ್ಲಿ ಚಿತ್ರಿಸಿರುವ ರೀತಿಯ ಯಾವುದೇ ಘಟನೆ ನಡೆದಿರುವುದು ದೃಢಪಟ್ಟಿಲ್ಲ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ವಿಡಿಯೋದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಆರೋಪಿಸಲಾದ ವ್ಯಕ್ತಿಗಳ ವಿರುದ್ಧದ ಆರೋಪಗಳು ಸುಳ್ಳು ಹಾಗೂ ಕಟ್ಟುಕಥೆಯಿಂದ ಕೂಡಿರುವುದು ಈವರೆಗಿನ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಸಿಸಿಬಿ ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದ ವಿಡಿಯೋದಲ್ಲಿನ ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಂಬಂಧಪಟ್ಟ ವ್ಯಕ್ತಿಗಳ ಹೇಳಿಕೆಗಳು ಹಾಗೂ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ. ಆದರೆ, ಆರೋಪಗಳನ್ನು ಸಮರ್ಥಿಸುವ ಯಾವುದೇ ದೃಢವಾದ ಸಾಕ್ಷ್ಯಗಳು ಈವರೆಗೆ ದೊರೆತಿಲ್ಲ ಎಂದು ತಿಳಿಸಲಾಗಿದೆ.

ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ಮಹತ್ವದ ಸ್ಪಷ್ಟನೆ ದೊರೆತಂತಾಗಿದೆ. ಆದಾಗ್ಯೂ, ಪ್ರಕರಣದ ಎಲ್ಲ ಆಯಾಮಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಸಿಸಿಬಿ ಅಂತಿಮ ತನಿಖಾ ವರದಿ ಸಲ್ಲಿಸಬೇಕಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರ ಕರ್ನಾಟಕದ ಹಿರಿಯ ಚೇತನ, ಮುತ್ಸದ್ದಿ ಶಿವಾನಂದ ಕೌಜಲಗಿ ಇನ್ನಿಲ್ಲಸ್ಕೂಟರ್‌ನಿಂದ ಬಿದ್ದ ವೃದ್ಧನ ತಲೆ ಮೇಲೆ ಹರಿದ ಬಸ್: ಸ್ಥಳದಲ್ಲೇ ಸಾವುಅತ್ಯಾಚಾರಕ್ಕೆ ಪ್ರತೀಕಾರವಾಗಿ ಇಬ್ಬರ ಅಪಹರಣ: ₹10 ಲಕ್ಷ ಬೇಡಿಕೆ, 10 ಮಂದಿ ಬಂಧನಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಬಹಿರಂಗಬರಪೀಡಿತ ರೈತರಿಗೆ ₹2,500 ಪರಿಹಾರ362 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಸಂಕಷ್ಟ: ರಾಜ್ಯ ಸರ್ಕಾರದ ಕಾಯ್ದೆ ರದ್ದುಗೊಳಿಸಿದ ಸುಪ್ರೀಂ ಕೋರ್ಟನಂದಿನಿ ಹಾಲಿನ ದರ ₹8 ಹೆಚ್ಚಳ : ₹7 ರೈತರಿಗೆ, ₹1 ಕೆಎಂಎಫ್‌ಗೆಕೆಪಿಎಸ್‌ಸಿ ಪರೀಕ್ಷಾ ವ್ಯವಸ್ಥೆ: ಆನ್‌ಲೈನ್ ಮೂಲಕ ಪ್ರಶ್ನೆಪತ್ರಿಕೆ ರವಾನೆಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಪತಿ, ಪತ್ನಿ ಹಾಗೂ ಅಳಿಯನ ದುರ್ಮರಣಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೂನ್ಯ: ಪ್ರಧಾನಿ ಮೋದಿ ವ್ಯಂಗ್ಯ