LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ಸ್ಟಿಂಗ್ ಕಾರ್ಯಾಚರಣೆ : ಪವರ್ ಟಿವಿ ಮುಖ್ಯಸ್ಥ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು, ಅ.23 (ಸಮದರ್ಶಿ ಸುದ್ದಿ): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲಿ ಪವರ್ ಟಿವಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ ಶೆಟ್ಟಿಗೆ ಬೆಂಗಳೂರಿನ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

1 ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಜಾಮೀನುದಾರರನ್ನು ಒದಗಿಸುವಂತೆ ನ್ಯಾಯಾಲಯ ಸೂಚಿಸಿದೆ. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಮತ್ತು ಸಾಕ್ಷ್ಯಗಳನ್ನು ನಾಶಪಡಿಸಲು ಅಥವಾ ತಿರುಚಲು ಪ್ರಯತ್ನಿಸಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಸಿದ್ದರಾಮಯ್ಯ ನೀಡಿರುವ ದೂರಿನ ಮೇರೆಗೆ ತನಿಖೆ ಕೈಗೊಂಡಿರುವ ಬೆಂಗಳೂರಿನ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು ರಾಕೇಶ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಅವರನ್ನು ಬಿಡುಗಡೆ ಮಾಡಿ, ಮುಂದಿನ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಾಲ್ಕು ದಿನಗಳಿಂದ ತಂಗಿದ್ದ ರಾಕೇಶ ಶೆಟ್ಟಿಯನ್ನು ಬುಧವಾರ ರಾತ್ರಿ ವಶಕ್ಕೆ ಪಡೆದ ಪೊಲೀಸರು ಗುರುವಾರ ಮುಂಜಾನೆ ಬೆಂಗಳೂರಿಗೆ ಕರೆತಂದಿದ್ದರು ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯ ನಂತರ ಬಂಧನದ ಆತಂಕ ಎದುರಿಸುತ್ತಿದ್ದ ಅವರು ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ಕುರಿತು ಕಳೆದ ಒಂದು ವಾರದಿಂದ ಮಾಹಿತಿ ಸಂಗ್ರಹಿಸುತ್ತಿದ್ದ ಸೈಬರ್ ಅಪರಾಧ ವಿಭಾಗದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದಕ್ಕೂ ಮೊದಲು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಕೇಶ ಶೆಟ್ಟಿಯನ್ನು ಬಂಧಿಸುವಂತೆ ಆಗ್ರಹಿಸಿ ಬೆಂಗಳೂರು ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದರು. ಪೊಲೀಸ್ ಅಧಿಕಾರಿಗಳ ಕಚೇರಿಗಳ ಎದುರು ಪ್ರತಿಭಟನೆ ನಡೆಸಿ ಕ್ರಮಕ್ಕೆ ಗಡುವು ನೀಡಿದ್ದರು. ಪ್ರಕರಣದಲ್ಲಿ ಮತ್ತಿಬ್ಬರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನೂ ಅವರು ಮಾಡಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಮತದಾನ; ಅ.27ರಂದು ಮತ ಎಣಿಕೆಕರ್ನಾಟಕದಲ್ಲಿ 43.82 ಲಕ್ಷ ಎಸ್‌ಐಆರ್ ನೋಟಿಸ್‌ಗಳ ವಿಚಾರಣೆ ಪೂರ್ಣ; ಅ.27ಕ್ಕೆ ಅಂತಿಮ ಮತದಾರರ ಪಟ್ಟಿಸ್ಟಿಂಗ್ ಕಾರ್ಯಾಚರಣೆ : ಪವರ್ ಟಿವಿ ಮುಖ್ಯಸ್ಥ ಶೆಟ್ಟಿಗೆ ನಿರೀಕ್ಷಣಾ ಜಾಮೀನುಎಂಎಲ್‌ಸಿ ಚುನಾವಣೆಯಲ್ಲಿ ಅಕ್ರಮ : ಸಮಾಜವಾದಿ ಪಕ್ಷಭಿನ್ನಾಭಿಪ್ರಾಯ ಅಪರಾಧವಲ್ಲ : ಹೈಕೋರ್ಟಎಸ್ಐಆರ್ ರದ್ದತಿಗೆ ಆಗ್ರಹಿಸಿ ದಲಿತ, ರೈತ, ಕಾರ್ಮಿಕ ಸಂಘಟನೆಗಳ ಒಗ್ಗಟ್ಟಿನ ಪ್ರತಿಭಟನೆಎಸ್ಐಆರ್ ಸ್ಥಗಿತಕ್ಕೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆಮಸೀದಿ ಧ್ವಂಸಕ್ಕೆ ಆಕ್ಷೇಪ: ಕಚ್ ಜಿಲ್ಲಾಧಿಕಾರಿಗೆ ಹೈಕೋರ್ಟ ಸಮನ್ಸಸ್ಟಿಂಗ್ ಕಾರ್ಯಾಚರಣೆ ಹಿಂದೆ ಕೃಪಾ ಆಳ್ವಾ, ರಾಕೇಶ ಶೆಟ್ಟಿ: ಸಿದ್ದರಾಮಯ್ಯಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಕಾರ್ಯಾಚರಣೆಯಲ್ಲಿ ಕಾಂಗ್ರೆಸ್‌ನವರ ಕೈವಾಡ: ಯತೀಂದ್ರ ಆರೋಪ