LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿ

ಹೊಸದಿಲ್ಲಿ, ಜುಲೈ 21: ನೀಟ್‌ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ನಡೆದ ‘ಸಂಸತ್‌ ಚಲೊ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಪ್ರಹಾರವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು ಭಾರತೀಯ ಸಂಸ್ಕೃತಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಸಂಸತ್‌ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಪ್ರಶ್ನಿಸಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳ ಮೇಲೆ ಲಾಠಿ ಎತ್ತುವುದು ಸಂಪೂರ್ಣವಾಗಿ ಭಾರತೀಯ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಕಿಡಿಕಾರಿದರು.

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದೇವೆ. ಆದರೆ, ಈ ಬಗ್ಗೆ ಚರ್ಚೆ ನಡೆಸಲು ಸರ್ಕಾರದ ಅನುಮತಿ ಬೇಕೆಂದು ಅವರು ತಿಳಿಸಿದ್ದಾರೆ. ಸಂಸತ್ತಿನಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯವನ್ನೂ ಚರ್ಚಿಸಲು ಸರ್ಕಾರದ ಅನುಮತಿ ಪಡೆಯಬೇಕಾದರೆ, ಪ್ರಜಾಪ್ರಭುತ್ವದ ಸ್ಥಿತಿ ಏನಾಗಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಅವರು ಹೇಳಿದರು.

ದೇಶದ ಶಿಕ್ಷಣ ಹಾಗೂ ಪರೀಕ್ಷಾ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಪರೀಕ್ಷಾ ವ್ಯವಸ್ಥೆಯನ್ನು ‘ಗೆದ್ದಲುಗಳು ತಿಂದಂತಾಗಿದೆ’ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ತಮ್ಮ ಭವಿಷ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸುವುದರಲ್ಲಿ ಅವರ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು.

ಈ ವಿಚಾರವನ್ನು ನಾವು ಹಲವು ಬಾರಿ ಪ್ರಸ್ತಾಪಿಸಿದ್ದರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ. ವಿದ್ಯಾರ್ಥಿಗಳ ಬಳಿ ಅವರು ಕ್ಷಮೆಯಾಚಿಸಬೇಕು. ವಿದ್ಯಾರ್ಥಿಗಳನ್ನು ಪೊಲೀಸರು ಥಳಿಸುವಂತಹ ಘಟನೆಗಳು ತಕ್ಷಣ ನಿಲ್ಲಬೇಕು. ಲಾಠಿ ಪ್ರಹಾರದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿ ಮಾಡಲಿದ್ದೇನೆ ಎಂದು ಅವರು ತಿಳಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್, ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು. ಆದರೆ, ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವ್ಯಾಪ್ತಿಯಲ್ಲಿರುವ ಪೊಲೀಸ್ ಇಲಾಖೆ. ಆದ್ದರಿಂದ ಅಮಿತ್ ಶಾ ಕೂಡ ರಾಜೀನಾಮೆ ನೀಡಬೇಕು. ಗೃಹ ಸಚಿವರು ಪ್ರಧಾನಿಗೆ ಉತ್ತರದಾಯಕರಾಗಿರುವುದರಿಂದ ಪ್ರಧಾನಿ ಮೋದಿಯೂ ರಾಜಕೀಯ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿದೆಹಲಿ ಪೊಲೀಸರ ಲಾಠಿ ಪ್ರಹಾರದಲ್ಲಿ ಗಾಯಗೊಂಡ ಯುವತಿ ವೆಂಟಿಲೇಟರ್‌ನಲ್ಲಿ; ಸ್ಥಿತಿ ಗಂಭೀರ