LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೀಟ್ ಪರೀಕ್ಷೆ ರದ್ದು ಖಂಡಿಸಿ ಕೇಂದ್ರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಹೊಸದಿಲ್ಲಿ, ಮೇ 12 : ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದ ನೀಟ್-ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಎನ್‌ಎಸ್‌ಯುಐ ಕಾರ್ಯಕರ್ತರು ಮಂಗಳವಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ಸ್ಥಳ ತೊರೆಯದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಸಿಬ್ಬಂದಿ ಎಚ್ಚರಿಕೆ ನೀಡಿದ ದೃಶ್ಯಗಳು ವೈರಲಾಗಿವೆ.

ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ನಡೆದ ಆರೋಪದ ಹಿನ್ನೆಲೆ ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇತ್ತೀಚೆಗೆ ಪ್ರಕಟಿಸಿತ್ತು. ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕೂಡ ಕೇಂದ್ರ ಸರ್ಕಾರ ಆದೇಶ ನೀಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
144 ಶಾಸಕರ ಬೆಂಬಲದಿಂದ ವಿಶ್ವಾಸಮತ ಗೆದ್ದ ವಿಜಯನೀಟ್ ಪರೀಕ್ಷೆ ರದ್ದು ಬಹುದೊಡ್ಡ ಹಗರಣ : ಡಾ.ಶರಣಪ್ರಕಾಶ ಪಾಟೀಲರಾಜ್ಯದಲ್ಲಿ ಎಸ್.ಐ.ಆರ್. ಹೆಸರಿನಲ್ಲಿ 86 ಲಕ್ಷ ಮತದಾರರನ್ನು ಕೈಬಿಡುವ ಸಂಚು : ಎಂ.ಲಕ್ಷ್ಮಣನೀಟ್ ಪರೀಕ್ಷೆ ವೈಫಲ್ಯ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಬೇಡ ತರಕಾರಿ ಮಾರುವವರ ಸೋಗಿನಲ್ಲಿ ಕಳ್ಳತನ : ಅಂತರರಾಜ್ಯ ಗ್ಯಾಂಗ್ ಬಂಧನನೀಟ್ ಪರೀಕ್ಷೆ ರದ್ದು ಖಂಡಿಸಿ ಕೇಂದ್ರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಇಂಧನ ಮಿತವ್ಯಯದ ಕರೆಯ ಮಧ್ಯೆ ಬಿಜೆಪಿ ನಾಯಕನ 50 ವಾಹನಗಳ ರ‍್ಯಾಲಿ!ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದುರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ತೆ ಹೆಚ್ಚಳ ಘೋಷಣೆದೇಶದ ಪ್ರಧಾನಿಯ ಬಾಯಲ್ಲಿ ಸುಳ್ಳು ಹೇಳಿಕೆಗಳು ಶೋಭೆ ತರುವುದಿಲ್ಲ : ಸಿದ್ದರಾಮಯ್ಯ