LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Districts Dharwad

ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶ

ಅಳ್ನಾವರ, 13: ಸಮೀಪದ ಬೀಡಿ ಹೋಬಳಿಯ ಕರಿಕಟ್ಟಿ ಹದ್ದೆಯ ಸರ್ವೇ ನಂ. 05ರಲ್ಲಿರುವ ಸ್ಥಳೀಯ ರೈತ ಸೇಬಸ್ತೀನ್ ಬಾವತಿಸ ಸೋಜ ಅವರ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆಯನ್ನು ಕಾಡುಹಂದಿಗಳು ತಿಂದು ಹಾಳು ಮಾಡಿರುವ ಘಟನೆ ಬುಧವಾರ ನಡೆದಿದೆ.

ರೈತ ಸೇಬಸ್ತೀನ್ ಅವರು ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡು, ಅದರಿಂದ ಬರುವ ಆದಾಯದಿಂದ ಕುಟುಂಬದ ಜೀವನ ಸಾಗಿಸುತ್ತಿದ್ದಾರೆ. ಈ ಬಾರಿ ಉತ್ತಮ ಕಬ್ಬಿನ ಫಸಲು ಬೆಳೆದಿದ್ದು, ಫಸಲು ಕೈಗೆ ಬರುವ ಹಂತದಲ್ಲಿತ್ತು. ಆದರೆ, ಕಾಡುಹಂದಿಗಳ ಹಾವಳಿಯಿಂದ ಸಂಪೂರ್ಣ ಬೆಳೆ ನಾಶವಾಗಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಕಾಡುಹಂದಿಗಳ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರು ತೀವ್ರ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿ, ನಷ್ಟದ ಅಂದಾಜು ಮಾಡಬೇಕು. ಸರ್ಕಾರದಿಂದ ರೈತನಿಗೆ ಸೂಕ್ತ ಪರಿಹಾರ ಮಂಜೂರು ಮಾಡಬೇಕು ಎಂದು ರೈತ ಸಂಘಟನೆಯ ಮುಖಂಡರು ಒತ್ತಾಯಿಸಿದ್ದಾರೆ.

ರೈತ ಸಂಘಟನೆಯ ಮುಖಂಡರಾದ ಯಲ್ಲಪ್ಪ ಚನ್ನಾಪುರ, ಕಿಶೋರ ಮಿಠಾರಿ, ರಮಾನಂದ ಅಂಬಡಗಟ್ಟಿ, ಅಂತೋನ್ ಸೋಜ, ಬಿಸ್ವಪ್ಪ ಸುಂಬಳಿ, ರಮೇಶ ವೀರಾಪುರ, ಶಿವಾಜಿ ಅಂಬಡಗಟ್ಟಿ ಹಾಗೂ ಗೋಪಾಲ ಅಗಸಿಮನಿ ಸೇರಿದಂತೆ ಹಲವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ