LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಪಿಣರಾಯಿ ವಿಜಯನ್ ಪುತ್ರಿ ವೀಣಾಗೆ ಇಡಿ ಸಮನ್ಸ

ಹೊಸದಿಲ್ಲಿ, ಜೂ. 9 : ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ. ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ್ದು, ಈ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಜೂನ್ 12ರಂದು ಕೊಚ್ಚಿಯಲ್ಲಿರುವ ಜಾರಿ ನಿರ್ದೇಶನಾಲಯದ ವಲಯ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಗಾಗುವಂತೆ ವೀಣಾ ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ವೀಣಾ ಮಾತ್ರವಲ್ಲದೆ ಇನ್ನೂ ಹಲವು ಮಂದಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ್ದು, ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ.

ಕೇರಳ ಮೂಲದ ಮರಳು ಗಣಿಗಾರಿಕೆ ಸಂಸ್ಥೆಯಾಗಿರುವ ಕೊಚ್ಚಿನ್ ಮಿನರಲ್ಸ್ ಆ್ಯಂಡ್ ರುಟೈಲ್ ಲಿಮಿಟೆಡ್ ಹಾಗೂ ಸದ್ಯ ಕಾರ್ಯನಿರ್ವಹಣೆ ನಿಲ್ಲಿಸಿರುವ ವೀಣಾ ಅವರ ಎಕ್ಸಲಾಜಿಕ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ಈ ಪ್ರಕರಣವು ಇತ್ತೀಚಿನ ದಿನಗಳಲ್ಲಿ ಕೇರಳ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಕಳೆದ ತಿಂಗಳು ತಿರುವನಂತಪುರಂನಲ್ಲಿ ಪಿಣರಾಯಿ ವಿಜಯನ್ ವಾಸಿಸುತ್ತಿರುವ ಬಾಡಿಗೆ ಮನೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ವೀಣಾ ಅವರಿಗೆ ನೇರವಾಗಿ ಸಮನ್ಸ್ ಜಾರಿಯಾಗಿರುವುದು ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ