LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ ಫೋಗಟ್‌ಗೆ ಸುಪ್ರೀಮ ಕೋರ್ಟ ಅನುಮತಿ

ಹೊಸದಿಲ್ಲಿ, ಮೇ 30 : ಏಷ್ಯನ್ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ದೇಶದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಸುಪ್ರೀಮ ಕೋರ್ಟ ಶುಕ್ರವಾರ ಅನುಮತಿ ನೀಡಿದೆ.

ವಿನೇಶ್ ಫೋಗಟ್ ಅವರಿಗೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿದ್ದ ದಿಲ್ಲಿ ಹೈಕೋರ್ಟ ಆದೇಶವನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ ಆರಾಧೆ ಅವರ ಪೀಠ ನಡೆಸಿತು.

ವಿಚಾರಣೆ ವೇಳೆ ದಿಲ್ಲಿ ಹೈಕೋರ್ಟ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಭಾರತೀಯ ಕುಸ್ತಿ ಒಕ್ಕೂಟ ಮನವಿ ಮಾಡಿತ್ತು. ಆದರೆ ಹೈಕೋರ್ಟ ಆದೇಶಕ್ಕೆ ತಡೆ ನೀಡಲು ಸುಪ್ರೀಮ ಕೋರ್ಟ ನಿರಾಕರಿಸಿತು.

ವಿನೇಶ್ ಫೋಗಟ್ ಪರ ಹಾಜರಾಗಿದ್ದ ಹಿರಿಯ ವಕೀಲೆ ಮಾಧವಿ ದಿವಾನ್ ಅವರಿಗೆ ನ್ಯಾಯಮೂರ್ತಿ ನರಸಿಂಹ, ನಾವು ತಡೆಯುವುದಿಲ್ಲ, ಅವರು ಟ್ರಯಲ್ಸ್‌ನಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.

ಭಾರತೀಯ ಕುಸ್ತಿ ಒಕ್ಕೂಟ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿದ್ದು, ಪ್ರಕರಣದಲ್ಲಿ ಉದ್ಭವಿಸಿರುವ ಪ್ರಮುಖ ಕಾನೂನು ಪ್ರಶ್ನೆಗಳನ್ನು ಮುಂದಿನ ಹಂತದಲ್ಲಿ ಪರಿಶೀಲಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ಈ ಹಿಂದೆ ಮೇ 22ರಂದು ದಿಲ್ಲಿ ಹೈಕೋರ್ಟ ವಿಭಾಗೀಯ ಪೀಠವು ಮುಂಬರುವ ಏಷ್ಯನ್ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್ ಅವರಿಗೆ ಅವಕಾಶ ನೀಡಿತ್ತು. ಹೈಕೋರ್ಟ ಆದೇಶವನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಒಕ್ಕೂಟ ಸುಪ್ರೀಮ ಕೋರ್ಟ ಮೊರೆ ಹೋಗಿತ್ತು.

ಶುಕ್ರವಾರದ ಆದೇಶದೊಂದಿಗೆ ವಿನೇಶ ಫೋಗಟ್ ಅವರು ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಇದ್ದ ಅಡ್ಡಿ ನಿವಾರಣೆಯಾಗಿದ್ದು, ಏಷ್ಯನ್ ಕ್ರೀಡಾಕೂಟದ ತಂಡದಲ್ಲಿ ಸ್ಥಾನ ಪಡೆಯುವ ಅವಕಾಶ ಮುಂದುವರಿದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ