LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜೀವ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಮ ಕೋರ್ಟ ಆದೇಶ 

ಹೊಸದಿಲ್ಲಿ: ಮಾಜಿ ಪ್ರಧಾನಿ ರಾಜೀವ ಗಾಂಧಿ ಹಂತಕರ ಬಿಡುಗಡೆ ಮಾಡಿ ಎಂದು ಸುಪ್ರೀಮ ಕೋರ್ಟ ಆದೇಶ ಹೊರಡಿಸಿದೆ. ರಾಜೀವ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಇತರ ಐವರನ್ನು ಬಿಡುಗಡೆ ಮಾಡಲು ಆದೇಶ ನೀಡಿದೆ.



ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಆರ್‌ಪಿ ರವಿಚಂದ್ರನ್ ಅವರನ್ನು ಅವಧಿಗೂ ಮೊದಲೇ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಮ ಕೋರ್ಟ‌ಗೆ ಶಿಫಾರಸು ಮಾಡಿತ್ತು.



ರಾಜೀವ ಗಾಂಧಿಯ ಕೊಲೆಯ 7 ಅಪರಾಧಿಗಳ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಲು ತಮಿಳುನಾಡು ಸರ್ಕಾರ 4 ವರ್ಷಗಳ ಹಿಂದೆಯೇ ಒಪ್ಪಿಕೊಂಡಿತ್ತು ಎಂದು ಅಪರಾಧಿಗಳಾದ ಎಸ್​ ನಳಿನಿ ಮತ್ತು ಆರ್​ಪಿ ರವಿಚಂದ್ರನ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.



ಅವಧಿಗೆ ಮೊದಲೇ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಕೋರಿ ರಾಜೀವ ಗಾಂಧಿ ಹಂತಕರು ಸುಪ್ರೀಮ ಕೋರ್ಟ​ನಲ್ಲಿ ಸಲ್ಲಿಸಿರುವ ಅರ್ಜಿಗೆ ತಮಿಳುನಾಡು ಸರ್ಕಾರ ಬೆಂಬಲ ನೀಡಿದೆ.



ತಮ್ಮ ಸಹ ಅಪರಾಧಿ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದಂತೆ ತಮ್ಮನ್ನೂ ಬಿಡುಗಡೆ ಮಾಡುವಂತೆ ಕೋರಿ ನಳಿನಿ ಮತ್ತು ರವಿಚಂದ್ರನ್ ಸುಪ್ರೀಮ ಕೋರ್ಟ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಮ ಕೋರ್ಟ ಮಹತ್ವದ ಆದೇಶವನ್ನು ನೀಡಿದೆ.



2018ರ ಸೆಪ್ಟೆಂಬರ್ 9ರಂದು ನಡೆದ ಸಂಪುಟ ಸಭೆಯಲ್ಲಿ ರಾಜೀವ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳ ಕ್ಷಮಾದಾನ ಅರ್ಜಿಗಳನ್ನು ಪರಿಗಣಿಸಲಾಗಿತ್ತು. ಸಂವಿಧಾನದ ಆರ್ಟಿಕಲ್ 161ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಅನ್ವಯಿಸಿ ಅವರ ಜೀವಾವಧಿ ಶಿಕ್ಷೆಯನ್ನು ಹಿಂತೆಗೆದುಕೊಳ್ಳಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು.



1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್‌ ಮಾಜಿ ಪ್ರಧಾನಿ ರಾಜೀವ ಗಾಂಧಿಯನ್ನು ಹತ್ಯೆ ಮಾಡಿದ್ದರು. ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಇಂದು ಬಿಡುಗಡೆಗೊಳಿಸುವಂತೆ ಆದೇಶವನ್ನು ಸುಪ್ರೀಮ ಆದೇಶ ಹೊರಡಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ