LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೆಕ್ಸ ವೇಳೆ ಉದ್ಯಮಿಯ ಸಾವು: ಪತಿಯ ಸಹಾಯದಿಂದ ರಸ್ತೆಗೆ ಶವ ಎಸೆದ ಪ್ರಿಯತಮೆ

ಬೆಂಗಳೂರು: ಇಲ್ಲಿನ ಜೆ.ಪಿ.ನಗರದಲ್ಲಿರುವ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ವೇಳೆ ವ್ಯಕ್ತಿ ಮೃತಪಟ್ಟಿದ್ದು, ಬಳಿಕ ಆತನ ಶವವನ್ನು ಎಸೆದ ಆರೋಪದ ಮೇಲೆ ಮಹಿಳೆ, ಆಕೆಯ ಪತಿ ಮತ್ತು ಸೋದರ ಮಾವನನ್ನು ಪೊಲೀಸರು ಬಂಧಿಸಿದ್ದಾರೆ.



ನವೆಂಬರ 17 ರಂದು 67 ವರ್ಷದ ಉದ್ಯಮಿಯ ಮೃತದೇಹವು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಂತರ ಪೊಲೀಸರು ತನಿಖೆ ಪ್ರಾರಂಭಿಸಿದರು.



ಆ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ ಪೊಲೀಸರು ಆತನ ದೂರವಾಣಿ ಕರೆ ವಿವರಗಳನ್ನು ಪರಿಶೀಲಿಸಿದಾಗ ಆತ ತನ್ನ ಗೆಳತಿಯ ಮನೆಗೆ ಹೋಗಿರುವುದು ಪತ್ತೆಯಾಗಿದೆ.



ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಸಂತ್ರಸ್ತೆ ಮತ್ತು ಆರೋಪಿಯ ಗುರುತುಗಳನ್ನು ಪೊಲೀಸರು ತಡೆಹಿಡಿದಿದ್ದಾರೆ. ಆದರೆ ಪ್ರಾಥಮಿಕ ತನಿಖೆಯಲ್ಲಿ ವೃದ್ಧ ಉದ್ಯಮಿ ಬೆಂಗಳೂರಿನ 35 ವರ್ಷದ ಗೃಹಿಣಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ತಿಳಿದುಬಂದಿದೆ.



ನವೆಂಬರ್ 16 ರಂದು ಸಂಜೆ 5 ಗಂಟೆಯ ಸುಮಾರಿಗೆ ಉದ್ಯಮಿ ಆಕೆಯ ಮನೆಗೆ ಹೋಗಿದ್ದರು. ಅವರು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗಲೇ ಆಕೆಯ ಹಾಸಿಗೆಯಲ್ಲೇ ಸಾವನ್ನಪ್ಪಿದರು. ಭಯಗೊಂಡ ಮಹಿಳೆ ತನ್ನ ಪತಿ ಮತ್ತು ಸೋದರ ಮಾವನ ಬಳಿ ವಿಷಯ ಹೇಳಿಕೊಂಡಿದ್ದಾಳೆ. ವಿಷಯ ಬೆಳಕಿಗೆ ಬಂದರೆ ತನ್ನ ಮಾನ ಹಾಳಾಗುತ್ತದೆ ಎಂದು ಭಾವಿಸಿದ್ದಾಳೆ. ನಂತರ, ಮೂವರೂ ಉದ್ಯಮಿಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಜೆಪಿ ನಗರದ ಪ್ರತ್ಯೇಕ ಸ್ಥಳದಲ್ಲಿ ಎಸೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



ವಿಚಾರಣೆ ನಡೆಸಿದಾಗ, ಉದ್ಯಮಿ ತನ್ನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗಲೇ ಸಾವನ್ನಪ್ಪಿದನು ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಯಾರನ್ನೋ ಭೇಟಿಯಾಗುವುದಾಗಿ ಹೇಳಿ ಮನೆಯಿಂದ ಹೋಗಿದ್ದ ಆತ ವಾಪಸ್ ಬಾರದೇ ಇದ್ದಾಗ ನಾಪತ್ತೆ ದೂರು ನೀಡಿರುವುದಾಗಿ ಉದ್ಯಮಿಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ವ್ಯಕ್ತಿಗೆ ಹಲವಾರು ಆರೋಗ್ಯ ಸಮಸ್ಯೆಗಳಿದ್ದವು. ಆಗಸ್ಟನಲ್ಲಿ ಅವರು ಆಂಜಿಯೋಗ್ರಫಿ ಮಾಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಹೇಳಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ