LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು, ಜೂ. 5 : ಸಚಿವ ಸಂಪುಟದ ಖಾತೆ ಹಂಚಿಕೆ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ಪಕ್ಷದ ಪ್ರಮುಖ ನಾಯಕರಲ್ಲೊಬ್ಬರು ಮಾತ್ರವಲ್ಲದೆ ತಮ್ಮ ಆಪ್ತ ಸ್ನೇಹಿತರೂ ಆಗಿದ್ದಾರೆ ಎಂದು ಹೇಳಿದರು.

ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ. ಅವರು ಗ್ರಾಮೀಣ ಭಾಗದ ರಾಜಕಾರಣಿಯಾಗಿಲ್ಲ. ನಗರ ಪ್ರದೇಶಗಳಿಗೆ ಸಂಬಂಧಿಸಿದ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದಾರೆ ಎಂದು ತಿಳಿಸಿದರು.

ಖಾತೆ ಹಂಚಿಕೆ ಕುರಿತ ಅಸಮಾಧಾನವನ್ನು ಮಾತುಕತೆಯ ಮೂಲಕ ಬಗೆಹರಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ರಾಮಲಿಂಗಾ ರೆಡ್ಡಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸುವುದಾಗಿ ಹೇಳಿದರು.

ಇದೇ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪಕ್ಷದಲ್ಲಿ ಶಿಸ್ತು ಅತ್ಯಂತ ಮುಖ್ಯ. ಯಾವುದೇ ವಿಚಾರವಿದ್ದರೂ ಶಿಸ್ತುಬದ್ಧವಾಗಿ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಚಿವ ಸಂಪುಟ ರಚನೆಯ ಬಳಿಕ ಖಾತೆ ಹಂಚಿಕೆ ವಿಚಾರವಾಗಿ ಕೆಲ ನಾಯಕರ ಅಸಮಾಧಾನ ಬಹಿರಂಗವಾಗಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಮನ್ವಯದ ಸಂದೇಶ ನೀಡಿದ್ದು, ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಲು ಮುಂದಾಗಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ