LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಯುವತಿಯ ಮೃತದೇಹ ನಗ್ನಾವಸ್ಥೆಯಲ್ಲಿ ಪತ್ತೆ!

ಬೆಂಗಳೂರು, 28: ನಗರದ ಆಡಗೋಡಿ ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. 34 ವರ್ಷದ ಪೂಜಾ ದತ್ತ ಎಂಬುವರು ಮೃತ ಯುವತಿಯಾಗಿದ್ದು, ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ದಿನಾಂಕ 23ರಂದು ಪೂಜಾ ಅವರು ದಿನಸಿ ತರಲು ಮನೆಯಿಂದ ಹೊರಗೆ ಬಂದಿದ್ದೇ ಕೊನೆಯ ಬಾರಿ ಇತರರು ಕಂಡಿದ್ದು, ಅದರ ನಂತರ ಆಕೆ ಹೊರಗೆ ಕಾಣಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಏಪ್ರಿಲ್ 27ರಂದು ಸಂಜೆ ವೇಳೆ ಆಕೆ ವಾಸಿಸುತ್ತಿದ್ದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರು ಅನುಮಾನಗೊಂಡು ಮನೆ ಮಾಲೀಕರಿಗೆ ಮಾಹಿತಿ ನೀಡಿದರು.

ಪೊಲೀಸರ ಸಮ್ಮುಖದಲ್ಲಿ ಮನೆಯ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಬೆಚ್ಚಿಬೀಳಿಸುವ ದೃಶ್ಯ ಕಂಡುಬಂದಿತು. ಪೂಜಾ ಅವರು ನಗ್ನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮನೆಯ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದವು.

ಮೂಲತಃ ಜಾರ್ಖಂಡ‌ನ ಧನಬಾದ ಸಮೀಪದ ಹಿರಾಪುರ ನಿವಾಸಿಯಾಗಿದ್ದ ಪೂಜಾ ದತ್ತ ಅವರು ಕಳೆದ ಮೂರು ವರ್ಷಗಳಿಂದ ಆಡಗೋಡಿಯ ಮುನೇಕ್ಷಪ್ಪ ಲೇಔಟ‌ನಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಅವರು ನಗರದ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿದ ಮನೆ ಮಾಲಕಿ ಜನಕಮ್ಮ ಅವರು ಕೆಲವು ಮಾಹಿತಿ ಹಂಚಿಕೊಂಡಿದ್ದು ಹೆಚ್ಚಾಗಿ ಹಿಂದಿಯಲ್ಲೇ ಮಾತನಾಡುತ್ತಿದ್ದ ಪೂಜಾ ಒಂಟಿಯಾಗಿಯೇ ವಾಸಿಸುತ್ತಿದ್ದರು. ಆದರೆ ಒಬ್ಬ ಯುವಕ ಆಗಾಗ ಮನೆಗೆ ಬರುತ್ತಿದ್ದನು. ಆ ಯುವಕ ಬಂದಾಗಲೆಲ್ಲ ಪೂಜಾ ಜೊತೆ ಜಗಳವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಸದ್ಯ ಆಡಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಆಕೆಯನ್ನು ಭೇಟಿ ಮಾಡುತ್ತಿದ್ದ ಆ ಯುವಕ ಯಾರು ಎಂಬುದನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ