LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

15 ದಿನದ ಹಿಂದಷ್ಟೇ ಮದುವೆಯಾದ ನವದಂಪತಿಗಳ ದುರ್ಮರಣ

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವನ್ನಪ್ಪಿರುವ ಮನಕಲಕುವ ಘಟನೆ  ಜಿಲ್ಲೆಯ ಶಿಗ್ಗಾಂವ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗಿನ ಜಾವ ನಡೆದಿದೆ .



ಕಾರ್ತಿಕ್ ಹೂಗಾರ (34) ಮತ್ತು ಐಶ್ವರ್ಯ ಹೂಗಾರ (30) ಮೃತ ದಂಪತಿ. 15 ದಿನಗಳ ಹಿಂದೆಯಷ್ಟೇ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.



ದೇವರ ದರ್ಶನ ಪಡೆದು ಬರುವಾಗ ದುರಂತ: ಕಾರ್ತಿಕ್ ಅವರು ಪತ್ನಿ ಮತ್ತು ಸಂಬಂಧಿಕರ ಜೊತೆ  ಧಾರವಾಡ ಜಿಲ್ಲೆಯ ನವಲಗುಂದ ಕಾಮಣ್ಣನ ದರ್ಶನಕ್ಕೆ ಹೋಗಿದ್ದರು. ಕಾಮಣ್ಣನ ದರ್ಶನ ಪಡೆದು ಹಾವೇರಿಗೆ ಆಗಮಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ವಿಚಿತ್ರ ಅಂದರೆ ಐಶ್ವರ್ಯ ಅವರ ಗ್ರಾಮ ನೀರಲಗಿ ಕ್ರಾಸ್ ಬಳಿಯೇ ಅಪಘಾತ ಸಂಭವಿಸಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಿಗ್ಗಾಂವ್ ತಾಲೂಕಾಸ್ಪತ್ರೆಗೆ ತರಲಾಗಿದೆ. ಮೃತರ ಸಂಬಂಧಿಕರ ಅಕ್ರಂದನ ಮುಗಿಲುಮುಟ್ಟಿತ್ತು. ಹಾವೇರಿಯಲ್ಲಿ ಸಂಜೆ‌ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರಿನಿಂದ ಮೃತದೇಹಗಳನ್ನು ಹೊರತೆಗೆದರು. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು. ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ತಡಸ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.



ವರದಿಗಾರ ದಿವಂಗತ ಗಂಗಾಧರ ಹೂಗಾರ ಅವರ ಇಬ್ಬರು ಪುತ್ರರಾದ ಕಾರ್ತಿಕ್ ಮತ್ತು ಕರ್ಣ ಅವರಿಗೆ ಫೆ.14ರಂದು ಮದುವೆಯಾಗಿತ್ತು. ವಿವಾಹದ ಬಳಿಕ ಕರ್ಣ ಮತ್ತು ಅವರ ಪತ್ನಿ ಪ್ರವಾಸಕ್ಕೆ ತೆರಳಿದ್ದರು. ಕಾರ್ತಿಕ್ ತಮ್ಮ ಪತ್ನಿ ಮತ್ತು ಸಂಬಂಧಿಕರೊಂದಿಗೆ ದೇವರ ದರ್ಶನಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ