LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್

ಹಾವೇರಿ, ನ. 12: ತಮಿಳುನಾಡಿನಿಂದ ಬೆಳಗಾವಿಗೆ ಬರುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ಬುಧವಾರ ಸಂಜೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲ 6 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.

ತಮಿಳುನಾಡಿನ ಸೂಲೂರು ವಾಯುನೆಲೆಯಿಂದ ಬೆಳಗಾವಿಯ ಸಾಂಬ್ರಾ ವಾಯುಪಡೆ ತರಬೇತಿ ಕೇಂದ್ರದತ್ತ ಬರುತ್ತಿದ್ದ ಝಡ್‌ಡಿ 4050 ನೋಂದಣಿ ಸಂಖ್ಯೆಯ ಹೆಲಿಕಾಪ್ಟರ್‌ನಲ್ಲಿ ಮಾರ್ಗಮಧ್ಯೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪೈಲಟ್, ಮುನ್ನೆಚ್ಚರಿಕೆ ಕ್ರಮವಾಗಿ ಹೆಲಿಕಾಪ್ಟರ್‌ನ್ನು ಸುರಕ್ಷಿತ ಸ್ಥಳದಲ್ಲಿ ಇಳಿಸಲು ನಿರ್ಧರಿಸಿದ್ದಾರೆ.

ಅದರಂತೆ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿರುವ ಕಾಮನಹಳ್ಳಿ ಗ್ರಾಮದ ರೈತರೊಬ್ಬರ ಹೊಲದಲ್ಲಿ ಸಂಜೆ ಸುಮಾರು 5.45ರ ವೇಳೆಗೆ ಹೆಲಿಕಾಪ್ಟರ್‌ನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಪೈಲಟ್‌ನ ಸಮಯಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ. ಹೆಲಿಕಾಪ್ಟರ್‌ನಲ್ಲಿ ವಾಯುಪಡೆಯ ದೀಪಕ್ ಶರ್ಮಾ ಸೇರಿದಂತೆ ಒಟ್ಟು 6 ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಜನನಿಬಿಡ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ವಾಯುಪಡೆಯ ಹೆಲಿಕಾಪ್ಟರ್ ಇಳಿದಿರುವುದನ್ನು ಕಂಡ ವಾಹನ ಸವಾರರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕುತೂಹಲದಿಂದ ಸ್ಥಳಕ್ಕೆ ಧಾವಿಸಿದರು. ಹೆಲಿಕಾಪ್ಟರ್ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಕೆಲಕಾಲ ಸ್ಥಳದಲ್ಲಿ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶಿಗ್ಗಾಂವಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಲಿಕಾಪ್ಟರ್ ಸುತ್ತಮುತ್ತ ಭದ್ರತೆ ಕಲ್ಪಿಸಲಾಗಿದ್ದು, ತಾಂತ್ರಿಕ ದೋಷದ ಪರಿಶೀಲನೆ ಮತ್ತು ದುರಸ್ತಿಗಾಗಿ ವಾಯುಪಡೆಯ ತಾಂತ್ರಿಕ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರು, ಶೋಷಿತರ ಆಕ್ರೋಶ: ಬೆಳಗಾವಿ ಅಧಿವೇಶನದಲ್ಲಿ ಭರವಸೆ ಈಡೇರಿಸಲು ಗಡುವುಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್