LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

43ನೇ ಮಹಡಿಯಿಂದ ಜಿಗಿದ ವ್ಯಕ್ತಿ; ಆಘಾತಕಾರಿ ವಿಡಿಯೊ ವೈರಲ್

 

ನೋಯ್ಡಾ, ಅ. 3 : ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್‌-94ರ ಸೂಪರ್ನೋವಾ ಸಂಕೀರ್ಣದ ಸ್ಪೈರಾ ಟವರ್‌ನ 43ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಮೃತರನ್ನು ಹರಿಯಾಣದ ಮಾನೇಸರ್ ನಿವಾಸಿ ಸಂಭವ ಜೈನ್ ಎಂದು ಗುರುತಿಸಲಾಗಿದೆ.

ಸೂಪರ್ನೋವಾ ಎನ್‌ಸಿಆರ್ ಪ್ರದೇಶದ ಅತಿ ಎತ್ತರದ ವಸತಿ ಕಟ್ಟಡಗಳಲ್ಲಿ ಒಂದಾಗಿದೆ. ಸಂಭವ ಜೈನ್ ಕಟ್ಟಡದಲ್ಲಿನ ಏರ್‌ಬಿಎನ್‌ಬಿ ವಸತಿಯಲ್ಲಿ ಉಳಿದುಕೊಂಡಿದ್ದರು. ಶುಕ್ರವಾರವಷ್ಟೇ ಅವರು ಅಲ್ಲಿಗೆ ಬಂದಿದ್ದು, ಶನಿವಾರ ಮಧ್ಯಾಹ್ನದ ವೇಳೆಗೆ ಕೊಠಡಿ ಖಾಲಿ ಮಾಡಬೇಕಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜೈನ್ ಬಾಲ್ಕನಿಯ ಹೊರಭಾಗಕ್ಕೆ ತೆರಳಿದ್ದಾಗ ಸಮೀಪದಲ್ಲಿ ಕೆಲಸ ಮಾಡುತ್ತಿದ್ದವರು ಅವರನ್ನು ತಡೆಯಲು ಯತ್ನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿಯೂ ವ್ಯಕ್ತಿಯೊಬ್ಬರು ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದೆ. ಆದರೂ ಅವರು ಕೆಳಗೆ ಜಿಗಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮೊದಲು ಜೈನ್ ತಮ್ಮ ತಂದೆಯನ್ನು ಹಲವು ಬಾರಿ ಸಂಪರ್ಕಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅವರು ಹಣಕಾಸಿನ ಸಮಸ್ಯೆಯಿಂದ ಒತ್ತಡದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದನ್ನು ತನಿಖೆ ಮೂಲಕ ಖಚಿತಪಡಿಸಿಕೊಳ್ಳಲಾಗುತ್ತಿದೆ.

ಘಟನೆಯ ಕುರಿತು ಕುಟುಂಬದವರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಹಾಗೂ ವಿಧಿವಿಜ್ಞಾನ ತಂಡ ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಕಟ್ಟಡ ಮತ್ತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದ್ದು, ಘಟನೆಗೆ ಕಾರಣವಾದ ಎಲ್ಲ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST