LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತಂಗಿಯನ್ನು ಕೆರೆಗೆ ತಳ್ಳಿ ಹತ್ಯೆ; ಉಳಿಸಲು ಹೋದ ತಾಯಿಯೂ ನೀರು ಪಾಲು, ಕಾರಣ......

ಹುಣಸೂರು (ಮೈಸೂರು), ೨೪: ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಸಹೋದರಿಯನ್ನು ಅವರ ಅಣ್ಣನೇ ಕೆರೆಗೆ ತಳ್ಳಿ ಹತ್ಯೆಗೈದ ಘಟನೆ ಹುಣಸೂರು ತಾಲೂಕಿನ ಮರೂರಿನಲ್ಲಿ ನಡೆದಿದೆ. ಇದೇ ವೇಳೆ ಮಗಳನ್ನು ರಕ್ಷಿಸಲು ಕೆರೆಗೆ ಇಳಿದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.



ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮದ ಧನುಶ್ರೀ (19) ಮತ್ತು ತಾಯಿ ಅನಿತಾ (43) ಮೃತಪಟ್ಟ ದುರ್ದೈವಿಗಳು.



ಹುಣಸೂರಿನ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದ ಧನುಶ್ರೀ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ವಿಷಯ ತಿಳಿದ ನಿತೀಶ ತಂಗಿಗೆ ಬುದ್ದಿ ಹೇಳಿದ್ದ. ಮನೆಯವರಿಗೂ ಮಾಹಿತಿ ನೀಡಿದ್ದ. ಈ ಬಗ್ಗೆ ಜಗಳವೂ ನಡೆದಿತ್ತು.



ಇತ್ತೀಚೆಗೆ ಧನ್ಯಶ್ರೀ ಶ್ರೀ ಇನಸ್ಟಾಗ್ರಾಮನಲ್ಲಿ ಬುರ್ಖಾ ಧರಿಸಿಕೊಂಡು ಹೆಸರು ಬದಲಾಯಿಸಿಕೊಂಡಿದ್ದ ಬಗ್ಗೆ ಪೋಸ್ಟ ಮಾಡಿದ್ದಳು. ಇದನ್ನು ನೋಡಿ ಕೆಂಡಾಮಂಡಲನಾದ ನಿತೀಶನು ತಾಯಿಗೆ ತಿಳಿಸಿದ್ದಲ್ಲದೇ ತಂಗಿಯೊಂದಿಗೆ ಜಗಳ ಮಾಡಿದ್ದ. ಮಂಗಳವಾರ ತಂಗಿಯನ್ನು ಹಮ್ಮಿಗೆಯ ಅಜ್ಜಿ ಮನೆಗೆ ಬಿಡುವುದಾಗಿ ತಾಯಿಗೆ ಹೇಳಿ ಮೂವರು ಸಂಜೆ ಹಿರಿಕ್ಯಾತನಹಳ್ಳಿಯಿಂದ ಬೈಕ್‌ ಮೇಲೆ ಹೊರಟಿದ್ದರು. ಈ ವೇಳೆ ಮರೂರು ಬಳಿಯ ಕೆರೆಬಳಿ ಮೂತ್ರ ವಿಸರ್ಜನೆ ನೆಪದಲ್ಲಿ ಬೈಕ್ ನಿಲ್ಲಿಸಿದ ನಿತೀಶನು ಕೆಳಗಿಳಿದು ತಂಗಿಯನ್ನು ಕೆರೆಗೆ ತಳ್ಳಿದ್ದಾನೆ. ನೀರಿನಲ್ಲಿ ಮುಳುಗುವುದನ್ನು ಕಂಡ ತಾಯಿ ಮಗಳ ರಕ್ಷಣೆಗೆ ನೀರಿಗೆ ಇಳಿದಾಗ ಅವರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.



ಆರೋಪಿ ನಿತೀಶನನ್ನು ಗ್ರಾಮಾಂತರ ಠಾಣಾ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ ಬೆಳಿಗ್ಗೆ ಅಗ್ನಿಶಾಮದ ದಳದ ಸಿಬ್ಬಂದಿಗಳು ಶವವನ್ನು ಮೇಲೆತ್ತಿದರು. ವಿಷಯ ತಿಳಿದ ನೂರಾರು ಗ್ರಾಮಸ್ಥರು ಕೆರೆ ಬಳಿ ಜಮಾಯಿಸಿದ್ದರು‌.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ